ಮುಂಗಾರು ಮಳೆಗೆ ತುಂಬಿ ಹರಿಯುತ್ತಿರುವ ನದಿಗಳು: ರಾಜ್ಯದ 18 ಡ್ಯಾಂಗಳಿಗೆ ನೀರು

ಬೆಂಗಳೂರು: ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಜುಲೈ 21 ರವರೆಗೆ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮುಂಗಾರು ಮಳೆಗೆ ರಾಜ್ಯದ ಹಲವು ನದಿಗಳು ತುಂಬಿ ಹರಿಯುತ್ತಿವೆ.

ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚಾಗಿದೆ. ಮಂಡ್ಯದ ಕೆಆರ್‌ಎಸ್, ಉತ್ತರ ಕನ್ನಡ ಜಿಲ್ಲೆಯ ಸೂಪಾ ಡ್ಯಾಂ, ಕೊಡಗಿನ ಹಾರಂಗಿ ಜಲಾಶಯ ಮತ್ತು ಶಿವಮೊಗ್ಗದ ಲಿಂಗನಮಕ್ಕಿ ಜಲಾಶಯ ಸೇರಿದಂತೆ ರಾಜ್ಯದ 18ಡ್ಯಾಂಗಳು ಭರ್ತಿಯಾಗಿವೆ.

ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಹಾಗು ಕುಮಾರಧಾರಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳಗೊಂಡಿದೆ.

ನೈರುತ್ಯ ಮಾನ್ಸೂನ್ ಕರ್ನಾಟಕದ ಒಳನಾಡಿನಲ್ಲಿ ಹೆಚ್ಚು ಸಕ್ರಿಯವಾಗಿದ್ದು, ವಿವಿಧೆಡೆ ಭಾರೀ ಮಳೆ ಸುರಿಯುತ್ತಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ