ರಾಜ್ಯದಲ್ಲಿ ಯಾವುದೇ ಸಮಯದಲ್ಲಿ ಚುನಾವಣೆ ಬಂದ್ರೂ ಕಾಂಗ್ರೆಸ್ ಸಿದ್ಧ, ಆದ್ರೆ ಅವಧಿಪೂರ್ವ ಚುನಾವಣೆ ಸಾಧ್ಯತೆ ಕಡಿಮೆ

ಬೆಂಗಳೂರು: ಯಾವುದೇ ಸಮಯದಲ್ಲಿ ರಾಜ್ಯದಲ್ಲಿ ಚುನಾವಣೆ ಬಂದರೂ ಅದನ್ನು ಎದುರಿಸಲು ಕಾಂಗ್ರೆಸ್ ಸಿದ್ಧವಿದೆ. ಆದರೆ ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಸಾಧ್ಯತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಭ್ರಷ್ಟ ಮುಖ್ಯಮಂತ್ರಿಯಿಂದ ರಾಜೀನಾಮೆ ಪಡೆಯುತ್ತಿರುವುದು ಒಳ್ಳೆಯದು” ಎಂದು ಹೇಳಿದ್ದಾರೆ.
ಬಿಜೆಪಿ ಆಂತರಿಕ ಬಿಕ್ಕಟ್ಟನ್ನು ನಿಭಾಯಿಸುವುದಕ್ಕೆ ವಿಫಲವಾದಲ್ಲಿ ಚುನಾವಣೆಗೆ ಕಾಂಗ್ರೆಸ್ ಸಿದ್ಧವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು “ಚುನಾವಣೆ ಯಾವುದೇ ಸಮಯದಲ್ಲಿ ಬಂದರೂ ಎದುರಿಸಲು ಕಾಂಗ್ರೆಸ್ ಸಿದ್ಧವಾಗಿದೆ. ಆದರೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸಿದರೂ ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ನಡೆಯುವ ಸಾಧ್ಯತೆ ಕಡಿಮೆ ಎಂದು ಅವರು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಬಿಜೆಪಿ ನಾಯಕತ್ವದ ಬದಲಾವಣೆಯ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಾತನಾಡಿದ್ದ ಆಡಿಯೋ ವೈರಲ್ ಆಗತೊಡಗಿದ್ದು, ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ ದಟ್ಟವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ರಾಜ್ಯದಲ್ಲಿ ಬಿಜೆಪಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಲಿದೆ ಎಂದು ನಾನು ಈ ಹಿಂದೆಯೂ ಹೇಳಿದ್ದೆ. ಆದರೆ ಇದನ್ನು ಯಾರೂ ನಂಬಿರಲಿಲ್ಲ. ನನಗೆ ಈ ಬಗ್ಗೆ ಪ್ರಾರಂಭದಿಂದಲೂ ಮಾಹಿತಿ ಇತ್ತು. ಯಡಿಯೂರಪ್ಪ ಹಾಗೂ ಅವರ ಪುತ್ರ ಇಬ್ಬರೂ ಭ್ರಷ್ಟರು. ಯಡಿಯೂರಪ್ಪನವರದ್ದು ಭ್ರಷ್ಟಾಚಾರ ಸರ್ಕಾರ” ಎಂದು ಸಿದ್ದರಾಮಯ್ಯ ಆರೋಪಿಸಿದರು.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement