ಎಸ್ಸೆಸ್ಸೆಲ್ಸಿ ಪರೀಕ್ಷೆ: ಮೊದಲನೇ ದಿನ ಶೇ.99.64ರಷ್ಟು ವಿದ್ಯಾರ್ಥಿಗಳು ಹಾಜರ್‌, ಇದು ಕಳೆದ ವರ್ಷಕ್ಕಿಂತ ಹೆಚ್ಚು..!

ಬೆಂಗಳೂರು : ಕೊರೊನಾ ಸೋಂಕಿನ ಭೀತಿಯ ನಡುವೆಯೂ ಇಂದು (ಸೋಮವಾರ) ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆದಿದೆ.
ಪರೀಕ್ಷೆಗೆ ನೋಂದಾಯಿಸಿಕೊಂಡಂತ 8,75,508 ವಿದ್ಯಾರ್ಥಿಗಳಲ್ಲಿ ಕೇವಲ 2,992 ವಿದ್ಯಾರ್ಥಿಗಳು ಮಾತ್ರವೇ ಗೈರು ಹಾಜರಾಗಿದ್ದಾರೆ. ಶೇ.99.64ರಷ್ಟು ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಯಲ್ಲಿ ಹಾಜರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶಕುಮಾರ್ ಹೇಳಿದ್ದಾರೆ.
ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಶೇ.98.30ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಬಾರಿ ಶೇ.99.64ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಸಚಿವರು ತಿಳಿಸಿದರು.
ಈ ಸಲ ಕೋವಿಡ್ ಪಾಸಿಟಿವ್ ಇದ್ದೂ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆ 58 ಆಗಿದೆ. ಇವರಲ್ಲಿ ಬೆಂಗಳೂರು ಉತ್ತರ ಜಿಲ್ಲೆಯಿಂದ ಒಬ್ಬರು, ಬೆಂಗಳೂರು ದಕ್ಷಿಣ ಇಬ್ಬರು, ಮೈಸೂರು ಒಬ್ಬರು, ಮಂಡ್ಯದಲ್ಲಿ ನಾಲ್ವರು, ಉಡುಪಿಯಲ್ಲಿ ಮೂವರು, ಮಂಗಳೂರಿನಲ್ಲಿ 16 ವಿದ್ಯಾರ್ಥಿಗಳು, ಕೊಡಗು ಜಿಲ್ಲೆಯಲ್ಲಿ ಐವರು, ಚಿತ್ರದುರ್ಗದಲ್ಲಿ 7, ಚಿಕ್ಕಮಗಳೂರು 7, ಶಿವಮೊಗ್ಗ 1, ಹಾಸನ 3, ಗದಗ 1, ಬೆಳಗಾವಿ 2, ಉತ್ತರ ಕನ್ನಡ 5, ಕಲಬುರ್ಗಿ 1, ಕೊಪ್ಪಳ 1 ಸೇರಿದಂತೆ ಒಟ್ಟು 58 ವಿದ್ಯಾರ್ಥಿಗಳು ಕೊರೊನಾ ಪಾಸಿಟಿವ್ ಇದ್ದರೂ ಪರೀಕ್ಷೆಯನ್ನು ಕೋವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ತಿಳಿಸಿದರು.
ಇನ್ನೂ 2,817 ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಇದ್ದು ಪರೀಕ್ಷೆ ಬರೆದಿದ್ದಾರೆ. ಈ ಬಾರಿ ಸಮೀಪದಲ್ಲಿನ ಪರೀಕ್ಷಾ ಕೇಂದ್ರದಲ್ಲೇ ಪರೀಕ್ಷೆಯನ್ನು ವಿದ್ಯಾರ್ಥಿಗಳ 10,693 ವಲಸೆ ವಿದ್ಯಾರ್ಥಿಗಳು ಬರೆದಿದ್ದಾರೆ. ಹೊರರಾಜ್ಯಗಳಿಂದ 761 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು. 760 ವಿದ್ಯಾರ್ಥಿಗಳು ಹೊರ ರಾಜ್ಯದವರು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದರು.
ಬೈಂದೂರಿನ ಇಬ್ಬರು ವಿದ್ಯಾರ್ಥಿನಿಯರು ಬೋಟ್ ನಲ್ಲಿ ಬಂದು ಪರೀಕ್ಷೆ ಬರೆದು ಅದೇ ಬೋಟ್ ನಲ್ಲಿ ವಾಪಸ್ ಹೋಗಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಶಾಲೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿತ್ತು. ಆದರೆ ಯಾವುದೇ ತೊಂದರೆಯಾಗಿಲ್ಲ. ಕೂಡಲೇ ವಿದ್ಯಾರ್ಥಿಗಳನ್ನು ಮತ್ತೊಂದು ಕಟ್ಟಡದಲ್ಲಿನ ಕೊಠಡಿಗೆ ಸ್ಥಳಾಂತರಿಸಿ ಪರೀಕ್ಷೆಗೆ ಅವಕಾಶ ಮಾಡಲಾಗಿದೆ. ಪರೀಕ್ಷೆ ತಡವಾಗಿದ್ದರಿಂದ ಹೆಚ್ಚುವರಿ ಸಮಯಾವಕಾಶ ನೀಡಲಾಗಿದೆ ಎಂದರು.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement