ಹಿರಿಯೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು

ಚಿತ್ರದುರ್ಗ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಒಡೆದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಗಣೇಶ ದೇವಸ್ಥಾನ ಬಳಿ ಈ ಘಟನೆ ಇಂದು (ಸೋಮವಾರ) ಬೆಳಗಿನ ಜಾವ ಈ ಘಟನೆ ನಡೆದಿದ್ದು, ಜಯರಾಂ (28),ಪತ್ನಿ ಸುಶೀಲಾ (26), ಪುತ್ರ ಆಕಾಶ್ (4) ಮೃತರು ಎಂದು ಗುರುತಿಸಲಾಗಿದೆ.
ಮೃತರೆಲ್ಲರೂ ರಾಜಸ್ಥಾನ ಮೂಲದವರಾಗಿದ್ದು, ರಾಜಸ್ಥಾನ ದಿಂದ ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರು ಕಡೆ ಹೋಗುತಿದ್ದರು ಎಂದು ತಿಳಿದು ಬಂದಿದೆ. ರಾಜಾರಾಂ (28), ಕರ್ಣ (08) ಎಂಬ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಐಮಂಗಲ ಪೆಟ್ರೋಲ್ ಬಂಕ್ ಸಮೀಪ ಸೋಮವಾರ ನಸುಕಿನಲ್ಲಿ ಲಾರಿಯೊಂದು ನಿಂತಿತ್ತು. ಚಿತ್ರದುರ್ಗ ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿದ ತಕ್ಷಣ ಐಮಂಗಲ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಐಮಂಗಲ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement