ಭಾರತದಲ್ಲಿ 24 ಗಂಟೆಯಲ್ಲಿ 38,164 ಮಂದಿಗೆ ಕೊರೊನಾ ಹೊಸ ಸೋಂಕು

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 38,164 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 499 ಮಂದಿ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣಿ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಅಂಕಿ ಸಂಖ್ಯೆಗಳ ಪ್ರಕಾರ ಕಳೆದ 24ಗಂಟೆಗಳಲ್ಲಿ 38 ಸಾವಿರ ಮಂದಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಪ್ರಮಾಣ 3,11,44,229ರಷ್ಟಾಗಿದೆ.
4,21,665 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.1.35ರಷ್ಟಿದೆ. ಚೇತರಿಕೆಯ ಪ್ರಮಾಣ ಶೇ.97.32ರಷ್ಟಿದ್ದು, ಒಟ್ಟು 3,03,08,456 ಮಂದಿ ಗುಣಮುಖರಾಗಿದ್ದಾರೆ. ಕಳೆದ 104 ದಿನಗಳಲ್ಲೆ ಅತಿ ಕಡಿಮೆ ಪ್ರಕರಣಗಳು ವರದಿಯಾಗಿದ್ದು, ಶನಿವಾರದಿಂದ ಭಾನುವಾರದ ನಡುವೆ 995 ಪ್ರಕರಣಗಳು ಇಳಿಮುಖವಾಗಿವೆ.
ಕೊರೊನಾದಿಂದ ಒಟ್ಟು 4,14,108 ಮಂದಿ ಮ್ರತಪಟ್ಟಿದ್ದಾರೆ, , ಶೇ.1.33ರ ಪ್ರಮಾಣದಲ್ಲೇ ನಿಯಂತ್ರಣದಲ್ಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ದೇಶದಲ್ಲಿ ಈವರೆಗೂ ಒಟ್ಟು 44,54,22,256 ಮಂದಿಯನ್ನು ಪರೀಕ್ಷೆ ಒಳಪಡಿಸಲಾಗಿದೆ, ನಿನ್ನೆ ಒಂದೇ ದಿನ 14,63,593 ಮಂದಿಯನ್ನು ಪರೀಕ್ಷೆ ಒಳಪಡಿಸಲಾಗಿದೆ. ಅದರಲ್ಲಿ ಸೋಂಕಿತರ ಪ್ರಮಾಣ ಶೇ.2.61ರಷ್ಟಾಗಿದೆ. ಕಳೆದ 28 ದಿನಗಳಿಂದಲೂ ದೇಶದಲ್ಲಿ ಶೇ.3ರ ಒಳಗೆ ಸೋಂಕು ನಿಯಂತ್ರಣದಲ್ಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಪ್ರಮುಖ ಸುದ್ದಿ :-   50 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ : ಮಕ್ಕಳನ್ನು ಮನೆಗೆ ಕಳುಹಿಸಿದ ಶಾಲೆಗಳು, ಪರೀಕ್ಷೆಗಳು ಸ್ಥಗಿತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement