ಈ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

posted in: ರಾಜ್ಯ | 0

ಬೆಂಗಳೂರು: 2020-21ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದೆ. ಎಸ್ ಎಸ್ ಎಲ್ ಸಿ ಮತ್ತು ಪ್ರಥಮ ಪಿಯುಸಿಯಲ್ಲಿ ಪಡೆದಿರುವ ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳು ಫ‌ಲಿತಾಂಶ ಪಡೆದಿದ್ದಾರೆ.
ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಪಿಯುಸಿ ಫಲಿತಾಂಶ ಪ್ರಕಟ ಮಾಡಿದರು. ಎಸ್‌ಎಸ್ ಎಲ್ ಸಿ, ಪ್ರಥಮ ಪಿಯುಸಿ ಮತ್ತು ಕೃಪಾಂಕ ಅಂಕ ಸೇರಿಸಿ ಈ ಬಾರಿ ಫಲಿತಾಂಶ ನೀಡಲಾಗಿದೆ. ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾಲೇಜಿಗೆ ಬರುವ ಅಗತ್ಯವಿಲ್ಲ. ನೋಂದಾವಣಿ ಮಾಡಿದ ಮೊಬೈಲ್ ಸಂಖ್ಯೆಗೆ ಫಲಿತಾಂಶವು ಸಂದೇಶ ರೂಪದಲ್ಲಿ ಬರುತ್ತದೆ ಎಂದು ಸಚಿವರು ಹೇಳಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ