ಡಾ. ಇಂದು ಪಂಡಿತ್ ಪ್ರಾಚಾರ್ಯರಾಗಿ ಅಧಿಕಾರ ಸ್ವೀಕಾರ

ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಪ್ರತಿಷ್ಠಿತ ಬನಶಂಕರಿ ಕಲಾ ಹಾಗೂ ವಾಣಿಜ್ಯ ಮತ್ತು ಎಸ್.ಕೆ ಗುಬ್ಬಿ ವಿಜ್ಞಾನ ಪದವಿ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ. ಇಂದು ಪಂಡಿತ್ ಅಧಿಕಾರ ಸ್ವೀಕರಿಸಿದರು.
ಇವರು ಕಾಲೇಜಿನ ಶಿಕ್ಷಣಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಸುಮಾರು ೩೦ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಈ ಮೊದಲು ಪ್ರಾಚಾರ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ಜಿ. ಕೃಷ್ಣಮೂರ್ತಿಯವರು ಸೇವಾ ನಿವೃತ್ತಿ ಹೊಂದಿದ್ದಾರೆ. ನೂತನ ಪ್ರಾಚಾರ್ಯರಿಗೆ ಜೆ.ಎಸ್.ಎಸ್ ನ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ, ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದರವರು ಶುಭ ಹಾರೈಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ