ಅಶ್ಲೀಲ ಚಿತ್ರಗಳನ್ನು ಮಾಡಿದ ಆರೋಪದ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಮುಂಬೈ ಅಪರಾಧ ವಿಭಾಗವು ಸೋಮವಾರ ಅಶ್ಲೀಲ ಚಿತ್ರಗಳನ್ನು ನಿರ್ಮಿಸಿ ಕೆಲವು ಆ್ಯಪ್‌ಗಳ ಮೂಲಕ ಪ್ರಕಟಿಸಿದ ಆರೋಪದ ಮೇಲೆ ಬಂಧಿಸಿದೆ.
ಮುಂಬೈ ಪೊಲೀಸ್ ಆಯುಕ್ತರು ರಾಜ್ ಬಂಧನವನ್ನು ದೃಢೀಕರಿಸುವ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ತಮ್ಮ ಹೇಳಿಕೆಯಲ್ಲಿ, ಆಯುಕ್ತರು ಈ ಪ್ರಕರಣದಲ್ಲಿ ರಾಜ್ ಅವರನ್ನು “ಪ್ರಮುಖ ಸಂಚುಕೋರ” ಎಂದು ಉಲ್ಲೇಖಿಸಿದ್ದಾರೆ ಮತ್ತು ಅವರ ವಿರುದ್ಧ “ಸಾಕಷ್ಟು ಪುರಾವೆಗಳು” ಈಗಾಗಲೇ ಸಂಗ್ರಹವಾಗಿವೆ ಎಂದು ಹೇಳಿದ್ದಾರೆ ಎಂದು ಸುದ್ದ ಸಂಸ್ಥೆ ಎಎನ್‌ಐ ಟ್ವೀಟ್‌ ಮಾಡಿದೆ.
ಅಶ್ಲೀಲ ಚಲನಚಿತ್ರಗಳ ತಯಾರಿಕೆ ಮತ್ತು ಕೆಲವು ಅಪ್ಲಿಕೇಶನ್‌ಗಳ ಮೂಲಕ ಅವುಗಳನ್ನು ಪ್ರಕಟಿಸುವ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಅಪರಾಧ ಶಾಖೆಯಿಂದ ಬಂಧಿಸಲಾಗಿದೆ. ಅವರು ಪ್ರಮುಖ ಸಂಚುಕೋರರು ಎಂದು ತೋರುತ್ತದೆ. ಈ ಬಗ್ಗೆ: ಮುಂಬೈ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ ಎಂದು ಟ್ವೀಟ್‌ ಹೇಳಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಲ್ಪಾ ಶೆಟ್ಟಿ ಅಥವಾ ರಾಜ್ ಕುಂದ್ರಾ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ. ಹೆಚ್ಚಿನ ವಿವರಗಳನ್ನು ಕಾಯಲಾಗುತ್ತಿದೆ.
ವರದಿಗಳ ಪ್ರಕಾರ, ಫೆಬ್ರವರಿ 2021 ರಲ್ಲಿ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಮುಂಬೈ ಪೊಲೀಸರು ಈ ಪ್ರಕರಣದ ತನಿಖೆ ನಡೆಸಿದಾಗ ಅದರಲ್ಲಿ ರಾಜ್ ಕುಂದ್ರಾ ಭಾಗಿಯಾಗಿರುವುದು ಕಂಡುಬಂದಿದೆ.

ಪ್ರಮುಖ ಸುದ್ದಿ :-   'ಅನುಮಾನ ಆಧರಿಸಿ ಇವಿಎಂ ವಿರುದ್ಧ ನಿರ್ದೇಶನ ನೀಡಲು ಸಾಧ್ಯವೇ? : ಸುಪ್ರೀಂ ಕೋರ್ಟ್ ಪ್ರಶ್ನೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement