ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಎರಡು ದಿನ ಮಾತ್ರ ಎಸ್‌ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು, ಆಗಸ್ಟ್ 10ಕ್ಕೆ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಕೇವಲ ಬಹು ಆಯ್ಕೆ ಮಾದರಿ ಉತ್ತರಗಳಲ್ಲಿ ಸರಿ ಉತ್ತರಗಳನ್ನು ಒಎಂಆರ್ ಶೀಟ್ ನಲ್ಲಿ ಗುರುತಿಸುವುದು ಮಾತ್ರ ಇದೆ. ಜೊತೆಗೆ ಕೇವಲ ಎರಡು ಪರೀಕ್ಷೆಗಳನ್ನು ಮಾತ್ರ ಬರೆದರೆ ಆಯಿತು. ಹೀಗಾಗಿ ಮೌಲ್ಯಮಾಪನಕ್ಕೆ ಹೆಚ್ಚಿನ ಕಾಲಾವಕಾಶ ಬೇಕಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಆ. 10ಕ್ಕೆ ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ