ಇರಾಕ್ ನಲ್ಲಿ ಬಾಂಬ್ ಸ್ಫೋಟ: ೩೦ಕ್ಕೂ ಅಧಿಕ ಮಂದಿ ಸಾವು

ಬಾಗ್ದಾದ್: ಈದ್ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚು ಜನರು ಸೇರಿದ್ದ ಮಾರುಕಟ್ಟೆಯಲ್ಲಿ ಬಾಂಬ್ ಸ್ಪೋಟಗೊಂಡು ೩೦ಕ್ಕೂ ಅಧಿಕ ಜನರು ಮೃತಪಟ್ಟು ನೂರಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡ ಘಟನೆ ಇರಾಕ್ ರಾಜಧಾನಿ ಬಾಗ್ದಾದ್ ನ ಉಪನಗರ ಸದರ್ ಸಿಟಿಯಲ್ಲಿನ ಮಾರುಕಟ್ಟೆಯಲ್ಲಿ ಮಂಗಳವಾರ ಸಂಭವಿಸಿದೆ.

ಈ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಹೊತ್ತಿದ್ದು, ಅಬು ಹಮ್ಜಾ ಅಲ್-ಇರಾಕಿ ಹೆಸರಿನ ಆತ್ಮಾಹುತಿ ಬಾಂಬರ್ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ. ಇದು ಆರು ತಿಂಗಳಲ್ಲಿ ಬಾಗ್ದಾದ್ ನಲ್ಲಿ ನಡೆದ ಅತ್ಯಂತ ಭೀಕರ ಬಾಂಬ್ ಸ್ಫೋಟವಾಗಿದೆ.

ಇರಾಕ್ ಪ್ರಧಾನಿ ಮುಸ್ತಾಫ ಅಲ್-ಖದಿಮಿ ತುರ್ತು ಸಭೆ ಕರೆದಿದ್ದು, ಮುಂದಿನ ಕ್ರಮದ ಕುರಿತು ಚರ್ಚೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕೋಟಿಗಟ್ಟಲೆ ಬೆಲೆಗೆ ಮಾರಾಟವಾಗಿ ನೂತನ ದಾಖಲೆ ನಿರ್ಮಿಸಿದ ಭಾರತದ ಮೂಲದ ಈ ತಳಿಯ ಹಸು..! ಬೆಲೆ ಕೇಳಿದ್ರೆ ದಂಗಾಗ್ತೀರಾ...!!

ನಿಮ್ಮ ಕಾಮೆಂಟ್ ಬರೆಯಿರಿ

advertisement