ಯಡಿಯೂರಪ್ಪ ಬೆಂಬಲಿಸಿ ಮುರುಘಾ ಶರಣರ ನೇತೃತ್ವದಲ್ಲಿ ಅಖಾಡಾಕ್ಕಿಳಿದ ಹಲವು ಸ್ವಾಮೀಜಿಗಳು, ಬಿಎಸ್‌ವೈ ಬದಲಾದ್ರೆ ಬಿಜೆಪಿಗೇ ನಷ್ಟ ಎಂದು ಎಚ್ಚರಿಕೆ

ಚಿತ್ರದುರ್ಗ: ಬಿ.ಎಸ್‌.ಯಡಿಯೂರಪ್ಪ ಅವರನ್ನು ಅವಧಿ ಪೂರ್ಣಗೊಳ್ಳುವವರೆಗೂ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕು. ಒಂದು ವೇಳೆ ನಾಯಕತ್ವ ಬದಲಿಸಿದರೆ ಸಾಮೂಹಿಕ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಹಲವಾರು ಮಠಾಧೀಶರು ಬಿಜೆಪಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಮುರುಘಾಠದಲ್ಲಿ ಶಿವಮೂರ್ತಿ ಮುರುಘಾ ಶರಣರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಲವು ಮಠಾಧೀಶರು ಯಡಿಯೂರಪ್ಪ ಅವರಿಗೆ ತಮ್ಮ ಒಮ್ಮತದ ಬೆಂಬಲ ವ್ಯಕ್ತಪಡಿಸಿದರು. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ದಿಢೀರ್‌ ಅಗಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಠಾಧೀಶರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬಹಿರಂಗವಾಗಿಯೇ ಬೆಂಬಲ ಘೋಷಿಸಿದರು.

ಒಂದು ವೇಳೆ ಬಿಜೆಪಿ ಹೈಕಮಾಂಡ್‌ ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡಿದರೆ ಯಡಿಯೂರಪ್ಪ ಅವರಿಗೆ ತೊಂದರೆಯಾಗುವುದಿಲ್ಲ. ಆದರೆ, ಇದರಿಂದ ಬಿಜೆಪಿಗೆ ಹಿನ್ನಡೆಯಾಗಬಹುದು. ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದವರನ್ನು ನಿರ್ಲಕ್ಷಿಸುವುದರಿಂದ ಮುಂದೆ ಬಿಜೆಪಿ ಭಾರಿ ಬೆಲೆ ತೆರಬೇಕಾಗುತ್ತದೆ. ಅವಧಿಗೂ ಮುನ್ನವೇ ಮುಖ್ಯಮಂತ್ರಿ ಬದಲಾವಣೆ ಮಾಡಿ ಯಡಿಯೂರಪ್ಪ ಅವರಿಗೆ ಅವಮಾನವಾದರೆ ಪಕ್ಷಕ್ಕೆ ತೊಂದರೆ ಆಗುವುದು ಖಚಿತ’ ಎಂದು ಶಿವಮೂರ್ತಿ ಮುರುಘಾ ಶರಣರು ಹೇಳಿದರು.
ಯಡಿಯೂರಪ್ಪ ಜನನಾಯಕ. ರಾಜ್ಯದಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಸಂಘಟಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಮೊದಲ ಬಿಜೆಪಿ ಸರ್ಕಾರವನ್ನು ಾಧಿಕಾರಕ್ಕೆ ಹೆಗ್ಗಳಿಕೆ ಅವರಿಗಿದೆ. ಇಂಥ ಮುತ್ಸದ್ಧಿ ಹಾಗೂ ಜನಪ್ರಿಯ ನಾಯಕನನ್ನು ಕಡೆಗಣಿಸುವುದು ಸರಿಯಲ್ಲ. ಅವರ ಗೌರವಕ್ಕೆ ಧಕ್ಕೆ ಉಂಟಾಗುವಂತಹ ಯಾವುದೇ ನಡೆ ಹಾಗೂ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಹೇಳಿದರು.
ಯಡಿಯೂರಪ್ಪ ಅಇಳಿ ವಯಸ್ಸಿನಲ್ಲೂ ಕ್ರಿಯಾಶೀಲರಾಗಿದ್ದಾರೆ. ಕೋವಿಡ್ ಸಂಕಷ್ಟವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಆ ಪಕ್ಷದ ಹೈಕಮಾಂಡಿಗೆ ಬಿಟ್ಟ ವಿಚಾರ. ನಿರ್ಣಯ ತೆಗೆದುಕೊಳ್ಳುವ ಅವಕಾಶ ಪಕ್ಷದ ವರಿಷ್ಠರಿಗಿದೆದೆ. ಆದರೆ ಹೈಕಾಂಡ್‌ ಹೇಳಿದಾಕ್ಷಣವೇ ಪರ್ಯಾ ನಾಯಕ ಉದ್ಭವವಾಗುವುದಿಲ್ಲ . ಹೀಗಾಗಿ ಯಡಿಯೂರಪ್ಪ ಅವರನ್ನು ಬದಲಾಯಿಸಿದರೆ ಅದು ಬಿಜೆಪಿಗೇ ನಷ್ಟ ಎಂದು ಹೇಳಿದರು.
ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ದಕ್ಷಿಣ ಭಾರತದಲ್ಲಿ ಪ್ರಥಮವಾಗಿ ಪಕ್ಷವನ್ನು ಅಧಿಕಾರಕ್ಕೆ ತಂದವರು ಯಡಿಯೂರಪ್ಪನವರು. ಅವರು ಅಧಿಕಾರಕ್ಕೆ ಬಂದ ನಂತರ ಎಲ್ಲ ಶೋಷಿತ ಸಮುದಾಯದ ಮಠಗಳನ್ನು ಮೇಲೆತ್ತಿದರು. ಅವರು ಮುಖ್ಯಮಂತ್ರಿಯಾದಾಗಲೆಲ್ಲ ಸುಗಮ ಆಡಳಿತ ನಡೆಸಲು ಬಿಡುತ್ತಿಲ್ಲ ಎಂಬ ಭಾವನೆಯಿದೆ. ಇದರ ಪುನರಾವರ್ತನೆ ಹಾಗೂ ಪುಷ್ಟೀಕರಣ ಸಲ್ಲ ಎಂದು ಹೇಳಿದರು.
ಅತಿವೃಷ್ಟಿ, ಅನಾವೃಷ್ಟಿ ಜೊತೆಯಲ್ಲೇ ಬಂದ ಕೋವಿಡ್ ಸಂಕಷ್ಟವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ರಾಜ್ಯದ ಅಭಿವೃದ್ಧಿಗೂ ಶ್ರಮಿಸುತ್ತಿದ್ದಾರೆ. ಈ ಅವಧಿ ಮುಗಿಯುವವರೆಗೂ ಅವರಿಗೆ ಅವಕಾಶ ನೀಡಬೇಕು’ ಎಂದು ಆಗ್ರಹಿಸಿದರು.
ಕುಂಚಿಟಿಗ ಗುರುಪೀಠದ ಶಾಂತವೀರ ಸ್ವಾಮೀಜಿ, ‘ಯಡಿಯೂರಪ್ಪ ಕೇವಲ ವೀರಶೈವ-ಲಿಂಗಾಯತ ಸಮುದಾಯಕ್ಕೆ ಮಾತ್ರವಲ್ಲ. ಎಲ್ಲ ಸಮುದಾಯದ ನಾಯಕರು. ಬಸವಣ್ಣನ ಕಾಯಕ ಪ್ರಜ್ಞೆಗೆ ಸಾಕ್ಷಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಎಲ್ಲ ಸಮಾಜದ ಹಾಗೂ ಮಠ-ಮಾನ್ಯಗಳ ಬೆಂಬಲಿದೆ. ಪರ್ಯಾಯ ನಾಯಕತ್ವ ಬೆಳೆಸುವ ನಿಟ್ಟಿನಲ್ಲಿ ಯಾರ ವಿರೋಧವೂ ಇಲ್ಲ. ಆದರೆ, ಯಡಿಯೂರಪ್ಪ ಬದಲಾವಣೆ ಸರಿಯಲ್ಲ’ ಎಂದರು.
ಮೇಲ್ವರ್ಗದವರ ಪಕ್ಷ ಎಂಬ ಮಾತನ್ನು ದಕ್ಷಿಣ ಭಾರತದಲ್ಲಿ ಹುಸಿಯಾಗಿಸಿ, ಸರ್ವ ಸಮಾಜವನ್ನೂ ಒಟ್ಟಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಯಡಿಯೂರಪ್ಪ ಶ್ರಮಿಸುತ್ತಿದ್ದಾರೆ. ಹೀಗಾಗಿ ಅವರ ವಿಚಾರದಲ್ಲಿ ನಿರ್ಲಕ್ಷ್ಯ ಸಲ್ಲ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ,
ಇಳಕಲ್‌ನ ಗುರುಮಹಾಂತೇಶ್ವರ ಮಠದ ಗುರುಮಹಾಂತ ಸ್ವಾಮೀಜಿ, ಅಥಣಿ ಗಚ್ಚಿನಮಠದ ಶಿವಬಸವ ಸ್ವಾಮೀಜಿ, ಶಿರಸಿ ರುದ್ರದೇವರ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಸತ್ತಿಮಠದ ಸ್ವಾಮೀಜಿ, ಚಳ್ಳಕೆರೆಯ ಬಸವಕಿರಣ ಸ್ವಾಮೀಜಿ, ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ ಮೊದಲಾದವರಿದ್ದರು.

ಪ್ರಮುಖ ಸುದ್ದಿ :-   ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement