ಕೇಂದ್ರ ಸರ್ಕಾರ ಗೂಢಚರ್ಯೆ ನಡೆಸುತ್ತಿರುವುದು ಗುಟ್ಟೇನಲ್ಲ : ಎಚ್‌ಡಿಕೆ

ಬೆಂಗಳೂರು: ಪೆಗಾಸಸ್ ಗೂಢಾಚರ್ಯೆವಿವಾದದಲ್ಲಿ ಕೇಂದ್ರ ಸರ್ಕಾರ ಸಿಲುಕಿಕೊಂಡಿದೆ. ಇತ್ತೀಚೆಗೆ ಕೇಂದ್ರ ಆದ್ಯತೆ ಮೇಲೆ ಗೂಢಚರ್ಯೆ ನಡೆಸು ತ್ತಿರುವುದು ಗುಟ್ಟೇನಲ್ಲ. ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು, ರಾಜ್ಯ ಗಳಲ್ಲಿ ಸರ್ಕಾರ ಕೆಡವಿ, ತಮ್ಮ ಸರ್ಕಾರವನ್ನು ತರಲು ಬಿಜೆಪಿ ಪ್ರಯೋಗಿಸಿರುವ ಅಸ್ತ್ರಗಳಲ್ಲಿ ಇದೂ ಒಂದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನನ್ನ ಮೇಲೆ ಗೂಢಚರ್ಯೆ ನಡೆಸಿದ್ದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೊನೆಗೆ ನನ್ನ ಮೇಲೆ ಫೋನ್ ಕದ್ದಲಿಕೆ ಆರೋಪ ಮಾಡಿ ಸಿಬಿಐ ತನಿಖೆ ನಡೆಸಿತು. ಆಗಲೇ ಅಪಮಾರ್ಗದಲ್ಲಿ ಹೆಜ್ಜೆ ಹಾಕಿದ್ದ ಬಿಜೆಪಿ, ನನ್ನ ಮೇಲಿನ ತನಿಖೆ ಮೂಲಕ ಆತ್ಮವಂಚನೆಯಿಂದ ನಡೆದುಕೊಂಡಿದೆ. ಅಧಿಕಾರಕ್ಕಾಗಿ ಬಿಜೆಪಿ ಕೀಳು ಮಟ್ಟಕ್ಕಿಳಿಯುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಟೀಕಿಸಿದ್ದಾರೆ.
ರಾಜಕಾರಣಿಗಳು, ಅಧಿಕಾರಿಗಳು, ಪತ್ರಕರ್ತರು, ಹೋರಾಟಗಾರರ ಮೇಲೆ ಗೂಢಚರ್ಯೆ ನಡೆಸಿರುವ ಬಿಜೆಪಿ ಮುಂದೊಂದು ದಿನ ಜನರ ವೈಯಕ್ತಿಕ ಬದುಕಿನಲ್ಲಿಯೂ ತಲೆಹಾಕುವುದಿಲ್ಲ ಎಂಬುದಕ್ಕೆ ಖಚಿತತೆ ಇದೆಯೇ? ಅಂತಹ ದಿನ ದೂರವಿಲ್ಲ. ಬಿಜೆಪಿ ದಮನಕಾರಿ ನಡೆ ಬಗ್ಗೆ ಜನರು ಜಾಗೃತರಾಗಬೇಕು ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement