ಕೋವಿಡ್ ನಿಂದ ಮುಂದೂಡಿದ್ದ ಕರ್ನಾಟಕ ವಿವಿ ಎಲ್ಲ ಪರೀಕ್ಷೆಗಳಿಗೆ ದಿನಾಂಕ ನಿಗದಿ

ಧಾರವಾಡ: ಕೋವಿಡ್ 2ನೇ ಆಲೆ ಹಾಗೂ ಸಾರಿಗೆ ಬಸ್ ಮುಷ್ಕರದಿಂದ ಮುಂದೂಡಲ್ಪಟ್ಟಿದ್ದ 2020 -21 ನೇ ಸಾಲಿನ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಗಳ ಪರೀಕ್ಷೆಗಳನ್ನು ಯುಜಿಸಿ ಮಾರ್ಗಸೂಚಿ ಹಾಗೂ ರಾಜ್ಯದ ಉನ್ನತ ಶಿಕ್ಷಣ ಇಲಾಖೆಯ ನಿರ್ದೇಶನಗಳನ್ವಯ ಸಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ವಿವಿ ಕುಲಪತಿ ಪ್ರೊ.ಕೆ.ಬಿ.ಗುಡಸಿ ಹೇಳಿದರು.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು. 26 ರಿಂದ ವಿವಿ ಆವರಣ ಸೇರಿದಂತೆ ಎಲ್ಲ ಪದವಿ ಕಾಲೇಜುಗಳಲ್ಲಿ ಬೋಧಕ ತರಗತಿಗಳು ಆರಂಭವಾಗಲಿವೆ. ವಿದ್ಯಾರ್ಥಿಗಳು ಕೋವಿಡ್ ಲಸಿಕೆ ಪಡೆದುಕೊಂಡು ತರಗತಿಗಳಿಗೆ ಕೋವಿಡ್ ನಿಯಮ ಪಾಲನೆಯೊಂದಿಗೆ ಹಾಜರಾಗಲು ಸೂಚಿಸಲಾಗಿದೆ ಎಂದು ತಿಳಿಸಿದರು..
ಮುಂದೂಡಲ್ಪಟ್ಟ 2020-21 ನೇ ಸಾಲಿನ ಸ್ನಾತಕ, ಸ್ನಾತಕೋತ್ತರ ಮತ್ತು ಡಿಪ್ಲೋಮಾ ಪದವಿಗಳ ಬೆಸ ಸೆಮಿಸ್ಟರ್ ಪರೀಕ್ಷೆಗಳನ್ನು ಆಗಸ್ಟ16ರಿಂದ ನಡೆಸಲಾಗುತ್ತದೆ. ಬಹು ಆಯ್ಕೆ ಪ್ರಶ್ನೆಗಳ ಪರೀಕ್ಷಾ ವಿಧಾನವನ್ನು ಕೈಬಿಡಲಾಗಿದೆ. ಬದಲಾಗಿ ಪದ್ಧತಿಯಂತೆ ವಿವರಣಾತ್ಮಕ ಉತ್ತರ ಬರೆಯುವ ವಿಧಾನದಲ್ಲಿ ಇರುತ್ತವೆ ಎಂದು ಮಾಹಿತಿ ನೀಡಿದರು.
ಪದವಿಯ ಅಂತಿಮ ವರ್ಷದ ಅಂತಿಮ ಸೆ ಗೆ 6ನೇ ಸೆಮಿಸ್ಟರ್‌, ನಾಲ್ಕು ವರ್ಷದ ಪದವಿಗೆ 8ನೇ ಸೆಮಿಸ್ಟರ್) ಪರೀಕ್ಷೆಗಳನ್ನು ನಡೆಸಿ,ಈ ಸಾಲಿನ ಮಧ್ಯಂತರ ಸಮ ಸೆಮಿಸ್ಟರ್‌ ಫಲಿತಾಂಶಗಳನ್ನು ಪ್ರಕಟಿಸಲು ನಿರ್ಧರಿಸಲಾಗಿದೆ. ಸಮ ಸೆಮಿಸ್ಟರ್‌ಗಳಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 15 ರಿಂದ ಅಂತಿಮ ಸೆಮಿಸ್ಟರ್‌ಗಳಿಗೆ ವಿವರಣಾತ್ಮಕ ಉತ್ತರ ಬರೆಯುವ ವಿಧಾನದಲ್ಲಿ ಪೂರ್ಣ ಪ್ರಮಾಣದಲ್ಲಿ ಪರೀಕ್ಷೆಗಳು ನಡೆಯುತ್ತವೆ ಎಂದು ತಿಳಿಸಿದರು.
ಮಧ್ಯಂತರ ಸಮ ಸೆಮಿಸ್ಟರ್‌ಗಳಿಗೆ ಸಂಬಂಧಿಸಿದಂತೆ ಆ ಸೆಮಿಸ್ಟರ್ ಗಳ ಅಂತರಿಕ ಅಂಕಗಳು ಹಾಗೂ ಹಿಂದಿನ ಸೆಮಿಸ್ಟರ್‌ ಅಂಕಗಳ ಆಧಾರದ ಮೇಲೆ (ಯುಜಿಸಿ 20200 ನಿಯಮಗಳನ್ವಯ) ಪಲಿತಾಂಶ ಪ್ರಕಟಿಸಲಾಗುತ್ತದೆ. ಸ್ನಾತಕೋತ್ತರ ಹಂತದಲ್ಲಿ 2ನೇ ಸೆಮಿಸ್ಟರ್ ಪರೀಕ್ಷೆ ರದ್ದು ಮಾಡಿದ್ದು, ಕೇವಲ ಆಂತರಿಕ ಅಂಕಗಳು ಮತ್ತು ಹಿಂದಿನ ಸೆಮಿಸ್ಟರ್‌ಗಳ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಲಾಗುತ್ತದೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಅಂತಿಮ ಸೆಮಿಸ್ಟರ್‌ಗಳಿಗೆ ಸಪ್ಟೆಂಬರ 15 ರಿಂದ ಪರೀಕ್ಷೆಗಳು ಆರಂಭವಾಗುತ್ತವೆ. 2021-22ರ ಶೈಕ್ಷಣಿಕ ಸಾಲಿನ ಎಲ್ಲಾ ಸ್ನಾತಕ ಮತ್ತು ಸ್ನಾತಕೋತ್ತರ ತರಗತಿಗಳು ಅಕ್ಟೋಬರ್ 1ರಿಂದ ಆರಂಭಗೊಳ್ಳಲಿದೆ.
ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಹಾಗೂ ಪದವಿ ಕಾಲೇಜುಗಳಲ್ಲಿ ಕೋವಿಡ್ ನಿಯಮಾನುಸಾರ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಲಸಿಕೆ ಪಡೆದು ತರಗತಿಗಳಿಗೆ ಬರಲು ಸೂಚಿಸಲಾಗಿದೆ. ಶೇಕಡಾ 98ರಷ್ಟು ವಿದ್ಯಾರ್ಥಿ ಹಾಗೂ ಸಿಬ್ಬಂದಿ ಲಸಿಕೆ ಪಡೆದಿದ್ದಾರೆ ಎಂದರು.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement