ಜುಲೈ 23ರಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿರುವ ಸಿಧು: ಸಿಎಂ ಅಮರಿಂದರ್ ಸಿಂಗ್ ಗೈರು ಸಾಧ್ಯತೆ

ಚಂಡೀಗಡ: ಜುಲೈ 23 ರಂದು ಚಂಡೀಗಡದಲ್ಲಿ ನಡೆಯುವ ಸಮಾರಂಭದಲ್ಲಿ ನವಜೋತ್ ಸಿಂಗ್ ಸಿಧು ಪಂಜಾಬ್ ಘಟಕದ ಕಾಂಗ್ರೆಸ್ ಮುಖ್ಯಸ್ಥರ ಹುದ್ದೆಯನ್ನು ಔಪಚಾರಿಕವಾಗಿ ವಹಿಸಿಕೊಳ್ಳಲಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಸಿಧು ಅವರೊಂದಿಗಿನ ಜಗಳದಲ್ಲಿ ಸಿಲುಕಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಈ ಕಾರ್ಯಕ್ರಮಕ್ಕೆ ಹಾಜರಾಗುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ.
ಸುಮಾರು 65 ಶಾಸಕರು ಸಹಿ ಮಾಡಿದ ಆಹ್ವಾನವನ್ನು ಸಿಧು ಮುಖ್ಯಮಂತ್ರಿಗೆ ಕಳುಹಿಸಿದ್ದಾರೆ. ಅವರು ಕಾರ್ಯಕ್ರಮಕ್ಕೆ ಪಂಜಾಬ್‌ನ ಉಸ್ತುವಾರಿ ಎಐಸಿಸಿ, ಹರೀಶ್ ರಾವತ್ ಅವರನ್ನು ಆಹ್ವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜುಲೈ 18 ರಂದು ಕಾಂಗ್ರೆಸ್ ಸಿಧು ಅವರನ್ನು ಪಕ್ಷದ ಪಂಜಾಬ್ ಘಟಕದ ಹೊಸ ಅಧ್ಯಕ್ಷರನ್ನಾಗಿ ನೇಮಿಸಿತು. 2017 ರಿಂದ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿದ್ದ ಸುನಿಲ್ ಜಾಖರ್ ಅವರ ಸ್ಥಾನದಲ್ಲಿ ಸಿಧು ಅವರನ್ನು ನೇಮಿಸಲಾಗಿದೆ.
ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಭೇಟಿ ಮಾಡಲು ನವಜೋತ್ ಸಿಂಗ್ ಸಿಧು ಸಮಯ ಕೋರಿದ್ದಾರೆಂಬ ವರದಿಗಳು ಸಂಪೂರ್ಣವಾಗಿ ಸುಳ್ಳು. ಯಾವುದೇ ಸಮಯವನ್ನೂ ಕೋರಿಲ್ಲ. ಅವರ ನಿಲುವುಗಳಲ್ಲಿ ಯಾವುದೇ ಬದಲಾವಣೆ ಇಲ್ಲ – ಸಿಧು ತಮ್ಮ ವಿರುದ್ಧ ವೈಯಕ್ತಿಕವಾಗಿ ಅವಹೇಳನಕಾರಿ ಸಾಮಾಜಿಕ ಮಾಧ್ಯಮ ದಾಳಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವವರೆಗೂ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಸಿಧು ಅವರನ್ನು ಭೇಟಿಯಾಗುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ರವೀನ್ ತುಕ್ರಾಲ್ ಮಂಗಳವಾರ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ