ದ್ವಿತೀಯ ಪಿಯುಸಿ ಫಲಿತಾಂಶ ಅತೃಪ್ತರಿಗೆ ಅರ್ಜಿ ಸಲ್ಲಿಸಲು ಜು.೩೦ರ ವರೆಗೆ ಅವಕಾಶ

posted in: ರಾಜ್ಯ | 0

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದ ಕುರಿತು ತೃಪ್ತಿ ಇಲ್ಲದ ವಿದ್ಯಾರ್ಥಿಗಳಿಗೆ ಜುಲೈ ೩೦ರೊಳಗೆ ಅರ್ಜಿ ಸಲ್ಲಿಸಲು ಸಚಿವ ಸುರೇಶ್ ಕುಮಾರ್ ಅವಕಾಶ ನೀಡಿದ್ದಾರೆ.

ಎಸ್.ಎಸ್.ಎಲ್.ಸಿ. ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಜು.೩೦ರೊಳಗೆ ಅರ್ಜಿ ಸಲ್ಲಿಸಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಪ್ರಾಂಶುಪಾಲರು ಸ್ಟೂಟೆಂಟ್ಸ್ ಅಚೀವ್ ಮೆಂಟ್ ಟ್ರ್ಯಾಕಿಂಗ್ ಪೋರ್ಟಲ್ ನಲ್ಲಿ ದಾಖಲಿಸಲು ಜು.೩೦ ಕೊನೆಯ ದಿನವಾಗಿದೆ. ಜು.೩೧ ರೊಳಗೆ ಅರ್ಜಿಗಳನ್ನು ಕಡ್ಡಾಯವಾಗಿ ತಮ್ಮ ಜಿಲ್ಲಾ ಉಪನಿರ್ದೇಶಕ ಕಚೇರಿಕೆ ಸಲ್ಲಿಸಬೇಕು. ಉಪ ನಿರ್ದೇಶಕರು ಆಗಸ್ಟ್ ೨ರೊಳಗೆ ಇಲಾಖೆಯ ಕೇಂದ್ರ ಕಚೇರಿಗೆ ಕಳುಹಿಸಬೇಕು.

ಪರೀಕ್ಷೆ ರದ್ದಾದರೂ ಫಲಿತಾಂಶ ನೀಡಲು ಇಲಾಖೆಗೆ ಹಾಲಿ ಸಂಗ್ರಹಿಸಿರುವ ಪರೀಕ್ಷಾ ಶುಲ್ಕದ ಮೊತ್ತಕ್ಕಿಂತ ಹೆಚ್ಚು ವೆಚ್ಚ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಆಗಿದೆ. ಇದರಿಂದಾಗಿ ಪರೀಕ್ಷಾ ಶುಲ್ಕ ವಾಪಸ್ ನೀಡುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.

 

ಅಸಕ್ತ ವಿದ್ಯಾರ್ಥಿಗಳಿಗೆ ಆಗಸ್ಟ್ ನಲ್ಲಿ ಪರೀಕ್ಷೆ:

ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ವಿದ್ಯಾರ್ಥಿಗಳು ಜು.೩೦ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಂತಹ ವಿದ್ಯಾರ್ಥಿಗಳು ತಮ್ಮ ಶಾಲೆಯ ಪ್ರಾಂಶುಪಾಲರನ್ನು ಭೇಟಿಯಾಗಿ ಅರ್ಜಿ ಸಲ್ಲಿಸಬರಹುದು. ಫಲಿತಾಂಶ ರದ್ದುಪಡಿಸಿಕೊಂಡ ವಿದ್ಯಾರ್ಥಿಗಳಿಗೆ ಆಗಸ್ಟ್ ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

 

ಉತ್ತೀರ್ಣರಾದವರಿಗೆ ಪದವಿಗೆ ಅವಕಾಶ:

ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ಪ್ರತಿಯೊಬ್ಬ ವಿದ್ಯಾರ್ಥಿಗೂ ಪದವಿ ವ್ಯಾಸಂಗಕ್ಕೆ ಅವಕಾಶವಾಗುವಂತೆ ಪದವಿ ಕಾಲೇಜುಗಳಲ್ಲಿನ ಸೀಟುಗಳ ಸಂಖ್ಯೆ ಹೆಚ್ಚಿಸಲು ಉನ್ನತ ಶಿಕ್ಷಣ ಇಲಾಖೆ ಕ್ರಮವಹಿಸಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಬಾರಿ ಪರೀಕ್ಷೆ ಬರೆದಿದ್ದ ಎಲ್ಲಾ ವಿದ್ಯಾರ್ಥಿಗಳನ್ನೂ ಪಾಸು ಮಾಡಿರುವುದರಿಂದ ಉನ್ನತ ಶಿಕ್ಷಣ ಪ್ರವೇಶಕ್ಕೆ ಸಹಜವಾಗಿಯೇ ಸಂಖ್ಯೆ ಹೆಚ್ಚಾಗಲಿದೆ. ಈ ಸಂಬಂಧ ಈಗಾಗಲೇ ಉನ್ನತ ಶಿಕ್ಷಣ ಇಲಾಖೆ ಸಚಿವ ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥ ನಾರಾಯಣ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಪದವಿ ಹಾಗೂ ಉನ್ನತ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರಕಾರ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ ಎನ್ನಲಾಗಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement