ದ್ವಿತೀಯ ಪಿಯುಸಿ ಫಲಿತಾಂಶ ಒಪ್ಪದ ವಿದ್ಯಾರ್ಥಿಗಳಿಗೆ ಆ.19ರಿಂದ ಪರೀಕ್ಷೆ ನಿಗದಿ

posted in: ರಾಜ್ಯ | 0

ಬೆಂಗಳೂರು: 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಮಂಗಳವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ್ ಪ್ರಕಟಿಸಿದರು.
ಮಲ್ಲೇಶ್ವರಂನ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ. 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಅವರಲ್ಲಿ 3,35,138 ವಿದ್ಯಾರ್ಥಿಗಳು, 3,31,359 ವಿದ್ಯಾರ್ಥಿನಿಯರಾಗಿದ್ದಾರೆ. ಗ್ರಾಮೀಣ ಭಾಗದಿಂದ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ 1,47,594. ಇದರಲ್ಲಿ 14,243 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ. ಎಲ್ಲ ರಿಪೀಟರ್ಸ್‌ಗಳೂ ಪಾಸ್ ಆಗಿದ್ದು, ಅವರಿಗೆ ಕನಿಷ್ಠ ಉತ್ತೀರ್ಣ ಅಂಕ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ..
ಫಲಿತಾಂಶದ ಬಗ್ಗೆ ಅಸಮಾಧಾನ ಇದ್ದವರು ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಜುಲೈ 30 ಕಡೇ ದಿನಾಂಕವಾಗಿದೆ. ಫಲಿತಾಂಶದಿಂದ ತೃಪ್ತರಾಗದವರಿಗೆ ಆಗಸ್ಟ್ 19ರಿಂದ ಸೆಪ್ಟೆಂಬರ್ 3ರವರೆಗೆ ಪರೀಕ್ಷೆ ನಡೆಯಲಿದೆ. ಫ್ರೆಶರ್ಸ್ ಫಲಿತಾಂಶ ತಿರಸ್ಕರಿಸಿ ಮತ್ತೆ ಪರೀಕ್ಷೆ ತೆಗೆದುಕೊಂಡರೆ ಅವರನ್ನು ಫ್ರೆಶರ್ಸ್ ಎಂದೇ ಪರಿಗಣಿಸಲಾಗುವುದು ಎಂದು ಅವರು ತಿಳಿಸಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ