ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಜುಲೈ 26ರ ಶಾಸಕಾಂಗ ಸಭೆ ದಿಢೀರ್‌ ರದ್ದು..!

ಬೆಂಗಳೂರು:ಮಹತ್ವದ ಬೆಳವಣಿಗೆಯಲ್ಲಿ ಜುಲೈ 26ರಂದು ಮುಖ್ಯಮಂತ್ರಿ ಯಡಿಯೂರಪ್ಪ ಕರೆದಿದ್ದ ಶಾಸಕಾಂಗ ಸಭೆಯನ್ನು ದಿಢೀರ್‌ ರದ್ದು ಪಡಿಸಲಾಗಿದೆ ಎಂದುತಿಳಿದುಬಂದಿದೆ.
ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಬಿಜೆಪಿ ಶಾಸಕಾಂಗ ಸಭೆಯನ್ನು ದಿಢೀರ್ ರದ್ದುಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಶಾಸಕಾಂಗ ಪಕ್ಷದ ಸಭೆಯನ್ನು ರದ್ದುಗೊಳಿಸಿ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಭೋಜನಕೂಟವನ್ನು ಆಯೋಜನೆ ಮಾಡಲಾಗಿದ್ದು,  ಜುಲೈ 25ರ ರಾತ್ರಿ ಭೋಜನಕೂಟ ನಡೆಯಲಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ. ಜುಲೈ 25ರಂದು ಮುಖ್ಯಮಂತ್ರಿ ಯಡಿಯೂರಪ್ಪ ಶಾಸಕಾಂಗ ಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು.
ಈಗ ಬಂದು ವರದಿಯಂತೆ ಬಿಜೆಪಿ ಶಾಸಕಾಂಗ ಸಭೆಯನ್ನು ರದ್ದು ಮಾಡಲಾಗಿದ್ದು, ಬದಲಿಗೆ ಶಾಸಕರುಗಳಿಗೆ ಜುಲೈ 25ರ ರಾತ್ರಿ ಭೋಜನಕೂಟ ಏರ್ಪಡಿಸಲಾಗಿದೆ. ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಭೋಜನಕೂಟ ಆಯೋಜಿಸಲಾಗಿದೆ.
ಅದರಂತೆ ಯಡಿಯೂರಪ್ಪ ಅವರು ಜು.26ಕ್ಕೆ ಎರಡು ವರ್ಷದ ಸಂಭ್ರಮಾಚರಣೆಯ ಜೊತೆ ಬಿಜೆಪಿ ಶಾಸಕಾಂಗ ಸಭೆ ಕರೆದಿದ್ದರು. ಈಗ ಕುತೂಹಲಕಾರಿ ಬೆಳವಣಿಗೆಯಲ್ಲಿ ಶಾಸಕಾಂಗ ಸಭೆ ರದ್ದಾಗಿದೆ ಎನ್ನಲಾಗಿದೆ. ಅದರ ಬದಲಿಗೆ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಭೋಜನಕೂಟ ಆಯೋಜಿಸಲಾಗಿದೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement