ದೆಹಲಿ ಕೆಂಪು ಕೋಟೆಗೆ ಆಗಸ್ಟ್ ೧೫ರ ವರೆಗೂ ಸಾರ್ವಜನಿಕ ಪ್ರವೇಶ ನಿಷೇಧ

ನವದೆಹಲಿ: ಕೊರೊನಾವೈರಸ್ ಹರಡುವಿಕೆ ಆತಂಕ ಮತ್ತು ಭದ್ರತೆ ದೃಷ್ಟಿಯಿಂದ ಇಂದಿನಿಂದ ಮುಂದಿನ ಆಗಸ್ಟ್ ೧೫ರವರೆಗೂ ದೆಹಲಿಯ ಐತಿಹಾಸಿಕ ಕೆಂಪುಕೋಟೆಯನ್ನು ಮುಚ್ಚಲಾಗುತ್ತಿದ್ದು, ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧಿಸಲಾಗುವುದು ಎಂದು ಭಾರತೀಯ ಪುರಾತತ್ವ ಇಲಾಖೆ ತಿಳಿಸಿದೆ.

ಜುಲೈ ೨೧ರ ಬೆಳಗ್ಗೆಯಿಂದ ಆಗಸ್ಟ್ ೧೫ರ ಸ್ವಾತಂತ್ರ್ಯ ದಿನಾಚರಣೆ ಮುಕ್ತಾಯವಾಗುವ ತನಕ ಕೆಂಪುಕೋಟೆಯಲ್ಲಿ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಇಲಾಖೆ ಸೂಚಿಸಿದೆ.

ಕೊರೊನಾವೈರಸ್ ಹರಡುವಿಕೆ ಆತಂಕ ಮತ್ತು ಭದ್ರತೆ ದೃಷ್ಟಿಯಿಂದ ಜುಲೈ ೧೫ರಿಂದ ಆಗಸ್ಟ್ ೧೫ರವರೆಗೂ ಕೆಂಪುಕೋಟೆಯನ್ನು ಮುಚ್ಚುವಂತೆ ದೆಹಲಿ ಪೊಲೀಸರು ಪತ್ರ ಬರೆದಿದ್ದ ಹಿನ್ನೆಲೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ದಿನ ಸನ್ನಿಹಿತವಾಗುತ್ತಿದ್ದಂತೆ ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸ್ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಆಗಸ್ಟ್ ೧೫ರ ಸ್ವಾತಂತ್ರ್ಯ ಸಂಭ್ರಮಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಸರಕಾರ ಕೈಗೊಳ್ಳುತ್ತಿದೆ.

 

 

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement