ಭೂಮಿಯತ್ತ ಬರುತ್ತಿದೆ ಬೃಹತ್ ಕ್ಷುದ್ರಗ್ರಹ: ಜುಲೈ ೨೪ಕ್ಕೆ ಭೂಮಿ ಬಳಿಯೇ ಹಾದು ಹೋಗಲಿದೆ

ಬೆಂಗಳೂರು: ಪ್ರತಿ ಸೆಕೆಂಡ್‌ಗೆ ೮. ಕಿ.ಮೀ ವೇಗದಲ್ಲಿ ಅಂದರೆ ಗಂಟೆಗೆ ೨೮,೦೦೦ ಕಿ.ಮೀ ವೇಗದಲ್ಲಿ ಚಲಿಸುತ್ತಿರುವ ಬ್ರಹದಾಕಾರದ ಕ್ಷುದ್ರ ಗ್ರಹವೊಂದು ಭೂಮಿಯತ್ತ ಧಾವಿಸಿ ಬರುತ್ತಿದೆ. ಇದು ಸ್ಟೇಡಿಯಂ ಗಾತ್ರದ ಬೃಹತ್ ಕ್ಷುದ್ರಗ್ರಹವಾಗಿದೆ. ೨೦೦೮ಜಿಒ೨೦ ಹೆಸರಿನ ಕ್ಷುದ್ರಗ್ರಹ ಜು.೨೪ ರಂದು ಭೂಮಿಯ ಸಮೀಪ ಸುರಕ್ಷಿತವಾಗಿ ಹಾದು ಹೋಗಲಿದೆ. ಕ್ಷುದ್ರಗ್ರಹ ಪ್ರತಿ ಗಂಟೆಗೆ ೨೮,೦೦೦ ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದು,  … Continued

ಕೋವಿಡ್ ನಿಂದ ಮುಂದೂಡಿದ್ದ ಕರ್ನಾಟಕ ವಿವಿ ಎಲ್ಲ ಪರೀಕ್ಷೆಗಳಿಗೆ ದಿನಾಂಕ ನಿಗದಿ

ಧಾರವಾಡ: ಕೋವಿಡ್ 2ನೇ ಆಲೆ ಹಾಗೂ ಸಾರಿಗೆ ಬಸ್ ಮುಷ್ಕರದಿಂದ ಮುಂದೂಡಲ್ಪಟ್ಟಿದ್ದ 2020 -21 ನೇ ಸಾಲಿನ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಗಳ ಪರೀಕ್ಷೆಗಳನ್ನು ಯುಜಿಸಿ ಮಾರ್ಗಸೂಚಿ ಹಾಗೂ ರಾಜ್ಯದ ಉನ್ನತ ಶಿಕ್ಷಣ ಇಲಾಖೆಯ ನಿರ್ದೇಶನಗಳನ್ವಯ ಸಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ವಿವಿ ಕುಲಪತಿ ಪ್ರೊ.ಕೆ.ಬಿ.ಗುಡಸಿ ಹೇಳಿದರು. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ … Continued

ಯಡಿಯೂರಪ್ಪ ಬೆಂಬಲಕ್ಕೆ ನಿಂತ ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ

ಚಿತ್ರದುರ್ಗ: ಸರ್ಕಾರಕ್ಕೆ ಪೂರ್ಣ ಪ್ರಮಾಣದಲ್ಲಿ ಸ್ವಾತಂತ್ರ್ಯವಿದ್ದರೆ ಉತ್ತಮ ಆಡಳಿತ ನಡೆಸಲು ಸಾಧ್ಯ ಎಂದು ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯ ತರಳಬಾಳು ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಅವರು, ಕೇಂದ್ರ ಸರ್ಕಾರ ಹತೋಟಿ ಸಾಧಿಸುವ ಸಂಚು ಮಾಡಿದರೆ ಎಂಥ ಮುಖ್ಯಮಂತ್ರಿ ಇದ್ದರೂ ಪರಿಪೂರ್ಣ ಆಡಳಿತ ಅಸಾಧ್ಯ ಎಂದು ಹೇಳಿದ್ದಾರೆ. ಉತ್ತಮ … Continued

ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಪತ್ನಿ ಲೂಯಿಸ್ ಖುರ್ಷಿದ್ ವಿರುದ್ಧ ಜಾಮೀನು ರಹಿತ ವಾರಂಟ್

ಫಾರೂಖಾಬಾದ್: ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಅವರ ಪತ್ನಿ ಲೂಯಿಸ್ ಖುರ್ಷಿದ್ ಅವರಿಗೆ ಕೇಂದ್ರ ಅನುದಾನದಲ್ಲಿ ಅವರ ಟ್ರಸ್ಟ್‌ , ಡಾ.ಜಕೀರ್ ಹುಸೇನ್ ಸ್ಮಾರಕ ಟ್ರಸ್ಟ್ ನಲ್ಲಿ 71 ಲಕ್ಷ ರೂ.ಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲಿನ ಪ್ರಕರಣದಲ್ಲಿ ನ್ಯಾಯಾಳಯವು ಜಾಮೀನು ರಹಿತ ವಾರಂಟ್‌ ಜಾರಿಗೊಳಿಸಿದೆ. ಮಂಗಳವಾರ, ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ … Continued

ಪೆಗಾಸಸ್ ಬಗ್ಗೆ ಸತ್ಯ ಕೋರಿ ಇಸ್ರೇಲಿಗೆ ಪತ್ರ ಬರೆಯಲು ಪ್ರಧಾನಿ ಮೋದಿಗೆ ಸುಬ್ರಮಣಿಯನ್ ಸ್ವಾಮಿ ಒತ್ತಾಯ

ನವದೆಹಲಿ: ಇಸ್ರೇಲ್ ಗೆ ಕಣ್ಗಾವಲು ತಂತ್ರಾಂಶ ಪೆಗಾಸಸ್ ಗೂಢಚರ್ಯೆ ಪ್ರಕರಣದ ಸಂಬಂಧ ನಾವು ಮುಚ್ಚಿಡುವಂಥದ್ದು ಏನೂ ಇಲ್ಲದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿಗೆ ಪತ್ರ ಬರೆದು ಸತ್ಯ ತಿಳಿಸುವಂತೆ ಹೇಳಲಿ ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, … Continued

ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಕೆ, ಗುಲಾಮ್ ನಬಿ ಆಜಾದ್, ಸಚಿನ್ ಪೈಲಟ್‌ಗೆ ಪ್ರಮುಖ ಹುದ್ದೆ ..?

ನವದೆಹಲಿ: 2024 ರ ಲೋಕಸಭಾ ಚುನಾವಣೆಯ ವರೆಗೆ ಸೋನಿಯಾ ಗಾಂಧಿ ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷರಾಗಿ ಉಳಿಯುವ ನಿರೀಕ್ಷೆಯಿದೆ ಮತ್ತು ಹಳೆಯ ಪಕ್ಷದ ಯುವ ಮುಖಗಳನ್ನು ಪ್ರಮುಖ ಹುದ್ದೆಗಳಿಗೆ ನೇಮಕ ಮಾಡುವ ಸಾಧ್ಯತೆಯಿದೆ. ರಾಹುಲ್ ಗಾಂಧಿಯನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆಯಿಲ್ಲ ಎಂದು ಎಂದು ಮೂಲಗಳು ಟೈಮ್ಸ್ ನೌ ವರದಿ ಮಾಡಿದೆ. 2024 ರ ಸಾರ್ವತ್ರಿಕ … Continued

ರಾಜ್ಯದಲ್ಲಿ ಇನ್ನೂ ೨ ದಿನ ವರುಣನ ಅಬ್ಬರ

posted in: ರಾಜ್ಯ | 0

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಕಳೆದ ಹದಿನೈದು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದು, ಶಿವಮೊಗ್ಗ, ಉಡುಪಿ, ಮಂಗಳೂರು, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಆಗುಂಬೆ ಸುತ್ತಮುತ್ತಲೂ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. … Continued

ದೆಹಲಿ ಕೆಂಪು ಕೋಟೆಗೆ ಆಗಸ್ಟ್ ೧೫ರ ವರೆಗೂ ಸಾರ್ವಜನಿಕ ಪ್ರವೇಶ ನಿಷೇಧ

ನವದೆಹಲಿ: ಕೊರೊನಾವೈರಸ್ ಹರಡುವಿಕೆ ಆತಂಕ ಮತ್ತು ಭದ್ರತೆ ದೃಷ್ಟಿಯಿಂದ ಇಂದಿನಿಂದ ಮುಂದಿನ ಆಗಸ್ಟ್ ೧೫ರವರೆಗೂ ದೆಹಲಿಯ ಐತಿಹಾಸಿಕ ಕೆಂಪುಕೋಟೆಯನ್ನು ಮುಚ್ಚಲಾಗುತ್ತಿದ್ದು, ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧಿಸಲಾಗುವುದು ಎಂದು ಭಾರತೀಯ ಪುರಾತತ್ವ ಇಲಾಖೆ ತಿಳಿಸಿದೆ. ಜುಲೈ ೨೧ರ ಬೆಳಗ್ಗೆಯಿಂದ ಆಗಸ್ಟ್ ೧೫ರ ಸ್ವಾತಂತ್ರ್ಯ ದಿನಾಚರಣೆ ಮುಕ್ತಾಯವಾಗುವ ತನಕ ಕೆಂಪುಕೋಟೆಯಲ್ಲಿ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಇಲಾಖೆ ಸೂಚಿಸಿದೆ. ಕೊರೊನಾವೈರಸ್ … Continued

ದ್ವಿತೀಯ ಪಿಯುಸಿ ಫಲಿತಾಂಶ ಒಪ್ಪದ ವಿದ್ಯಾರ್ಥಿಗಳಿಗೆ ಆ.19ರಿಂದ ಪರೀಕ್ಷೆ ನಿಗದಿ

ಬೆಂಗಳೂರು: 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಮಂಗಳವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ್ ಪ್ರಕಟಿಸಿದರು. ಮಲ್ಲೇಶ್ವರಂನ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ. 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಅವರಲ್ಲಿ 3,35,138 ವಿದ್ಯಾರ್ಥಿಗಳು, 3,31,359 ವಿದ್ಯಾರ್ಥಿನಿಯರಾಗಿದ್ದಾರೆ. ಗ್ರಾಮೀಣ ಭಾಗದಿಂದ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ 1,47,594. ಇದರಲ್ಲಿ 14,243 ವಿದ್ಯಾರ್ಥಿಗಳು … Continued

ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಜುಲೈ 26ರ ಶಾಸಕಾಂಗ ಸಭೆ ದಿಢೀರ್‌ ರದ್ದು..!

ಬೆಂಗಳೂರು:ಮಹತ್ವದ ಬೆಳವಣಿಗೆಯಲ್ಲಿ ಜುಲೈ 26ರಂದು ಮುಖ್ಯಮಂತ್ರಿ ಯಡಿಯೂರಪ್ಪ ಕರೆದಿದ್ದ ಶಾಸಕಾಂಗ ಸಭೆಯನ್ನು ದಿಢೀರ್‌ ರದ್ದು ಪಡಿಸಲಾಗಿದೆ ಎಂದುತಿಳಿದುಬಂದಿದೆ. ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಬಿಜೆಪಿ ಶಾಸಕಾಂಗ ಸಭೆಯನ್ನು ದಿಢೀರ್ ರದ್ದುಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಶಾಸಕಾಂಗ ಪಕ್ಷದ ಸಭೆಯನ್ನು ರದ್ದುಗೊಳಿಸಿ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಭೋಜನಕೂಟವನ್ನು ಆಯೋಜನೆ ಮಾಡಲಾಗಿದ್ದು,  ಜುಲೈ 25ರ ರಾತ್ರಿ ಭೋಜನಕೂಟ ನಡೆಯಲಿದೆ. … Continued