ಕರ್ನಾಟಕದಲ್ಲಿ ಗುರುವಾರ 1653 ಮಂದಿಗೆ ಕೊರೊನಾ ಸೋಂಕು

posted in: ರಾಜ್ಯ | 0

ಬೆಂಗಳೂರು: ಕರ್ನಾಟಕದಲ್ಲಿ ಗುರುವಾರ ಕೊರೊನಾ ವೈರಸ್ 1653 ಹೊಸ ಪ್ರಕರಣಗಳು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2572 ಸೋಂಕಿತರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 31 ಮಂದಿ ಕೊವಿಡ್-19 ಸೋಂಕಿನಿಂದಲೇ ಮೃತಪಟ್ಟಿದ್ದು, ಒಟ್ಟು 36293 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.17ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.87ರಷ್ಟಿದೆ.
ಗುರುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 28,89,994ಕ್ಕೆ ಏರಿಕೆಯಾಗಿದೆ. ಈವರೆಗೂ 28,28,983 ಸೋಂಕಿತರು ಗುಣಮುಖರಾಗಿದ್ದಾರೆ.ಒಟ್ಟು 24695 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ 418 ಜನರಿಗೆ ಹೊಸದಾಗಿ ಸೋಂಕು ತಗುಲಿದೆ.

ಜಿಲ್ಲಾವಾರು ಸಂಪೂರ್ಣ ಮಾಹಿತಿ ಪಿಡಿಎಫ್‌ನಲ್ಲಿ  ಕೊಡಲಾಗಿದೆ.

22-07-2021 HMB Kannada

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ