ಭಾರತದಲ್ಲಿ ಅನೇಕ ದಿನಗಳ ನಂತರ ಕೊರೊನಾ ಚೇತರಿಕೆಗಿಂತ ಹೊಸ ಪ್ರಕರಣಗಳಲ್ಲಿ ಹೆಚ್ಚಳ..!

ನವದೆಹಲಿ: ಭಾರತದಲ್ಲಿ ಗುರುವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್‌-19 ದೃಢಪಟ್ಟ 41,383 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 507 ಮಂದಿ ಮೃತಪಟ್ಟಿದ್ದಾರೆ ಹಾಗೂ 38,652 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಅನೇಕ ದಿನಗಳ ನಂತರ ಕೋವಿಡ್‌ ಚೇತರಿಕೆ ಪ್ರಮಾಣಕ್ಕಿಂತ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗಿದೆ.
ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 3,12,57,720 ಆಗಿದ್ದು, ಈ ಪೈಕಿ 3,04,29,339 ಮಂದಿ ಚೇತರಿಸಿಕೊಂಡಿದ್ದಾರೆ ಹಾಗೂ ಕೋವಿಡ್‌ ಕಾರಣಗಳಿಂದಾಗಿ 4,18,987 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 4,09,394 ಪ್ರಕರಣಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ತಿಳಿಸಿದೆ.
ದೇಶದಾದ್ಯಂತ ಈವರೆಗೂ 41,78,51,151 ಡೋಸ್‌ ಲಸಿಕೆ ಹಾಕಲಾಗಿದೆ. .

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ