ಮನೆ ಕನಸುಕಂಡ ಜನತೆಗೆ ಸಿಹಿ ಸುದ್ದಿ: 5 ಲಕ್ಷ ಮನೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ 4 ಲಕ್ಷ ಮನೆ ನಿರ್ಮಾಣ, ನಗರ ಪ್ರದೇಶದಲ್ಲಿ 1 ಲಕ್ಷ ಮನೆ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಮುಕ್ತಾಯಗೊಂಡ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸುಮಾರು 8 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಲಾಗುತ್ತದೆ. ಪ್ರತಿಯೊಂದು ಗ್ರಾಮ ಪಂಚಾಯತ್ ಸಭೆ ಮೂಲಕ ಮನೆ ನಿರ್ಮಿಸುತ್ತೇವೆ. ನಗರ ಪ್ರದೇಶದಲ್ಲಿ ಆಸರೆ ಸಮಿತಿ ಮೂಲಕ ಮನೆ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. 2 ವರ್ಷದಲ್ಲಿ ಒಟ್ಟು 5 ಲಕ್ಷ ಮನೆ ನಿರ್ಮಾಣಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಎರಡು ವರ್ಷದಲ್ಲಿ ಐದು ಲಕ್ಷ ಮನೆಗಳ ನಿರ್ಮಾಣಕ್ಕೆ ಹಣಕಾಸು ಇಲಾಖೆಯೊಂದಿಗೆ ಚರ್ಚೆ ನಡೆಸಿಯೇ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement