ರಾಜೀನಾಮೆ ಚಿಂತನೆ ನಡೆಸಿದ್ದೇವೆ ಎಂಬುದು ಸುಳ್ಳು : ಸಚಿವ ಬಿ.ಸಿ ಪಾಟೀಲ್

posted in: ರಾಜ್ಯ | 0

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಬಳಿಕ ತಮ್ಮ ರಾಜೀನಾಮೆ ನೀಡುವ ಕಾಂಗ್ರೆಸ್‌ನಿಂದ ವಲಸೆ ಬಂದ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ಸಚಿವ ಬಿ.ಸಿ.ಪಾಟೀಲ ಅವರು, ನಾವು ರಾಜೀನಾಮೆ ನೀಡಲು ಚಿಂತನೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ವಲಸಿಗ ಸಚಿವರ ರಾಜೀನಾಮೆ ಚಿಂತನೆ ನಡೆಸಿದ್ದಾರೆ ಎಂಬುದು ಸುದ್ದಿ ಸುಳ್ಳು , ನಾವು ರಾಜೀನಾಮೆ ನೀಡಲು ಚಿಂತನೆ ನಡೆಸಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ರಾಜೀನಾಮೆ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಯವರನ್ನು ಭೇಟಿಯಾಗಿರಲಿಲ್ಲ ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ. ವರ್ಗಾವಣೆ ಮತ್ತು ಕ್ಷೇತ್ರದ ಕೆಲಸಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲು ಬಂದಿದ್ದೆವು. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಹೈಕಮಾಂಡ್ ಸೂಚಿಸಿದರೆ ನಾವು ಕೂಡ ರಾಜೀನಾಮೆ ನೀಡುತ್ತೇವೆ ಎಂದು ಹೇಳಿದ್ದಾರೆ.
ಯಡಿಯೂರಪ್ಪ ಇರುವವರೆಗೂ ಅವರೊಂದಿಗೆ ಇರುತ್ತೇವೆ. ಹೈಕಮಾಂಡ್ ಕೊಡುವ ನಿರ್ದೇಶನವನ್ನು ಪಾಲಿಸುತ್ತೇವೆ. ನಮಗೆ ಯಾವುದೇ ರೀತಿಯ ಆತಂಕ ಇಲ್ಲ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ