ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ಗೆ ೩೨೪ ಮಂದಿ ಸಾವು

posted in: ರಾಜ್ಯ | 0

ಬೆಂಗಳೂರು: ಕೊರೋನಾ ಸೋಂಕು ರಾಜ್ಯದಲ್ಲಿ ತನ್ನ ಏರಿಳಿತ ಮುಂದುವರೆಸಿದ್ದು, ಅದರ ನಡುವೆಯೇ ಬ್ಲ್ಯಾಕ್ ಫಂಗಸ್ ಕೂಡ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಕಪ್ಪು ಶಿಲೀಂದ್ರ ಸೋಂಕಿಗೆ ರಾಜ್ಯದಲ್ಲಿ ಒಟ್ಟು ೩೨೪ ಜನರು ಬಲಿಯಾಗಿದ್ದಾರೆ.

ರಾಜ್ಯದಲ್ಲಿ ನಿನ್ನೆ ಒಂದೇ ದಿನ ಹನ್ನೊಂದು ಜನರು ಕಪ್ಪು ಶಿಲೀಂದ್ರಕ್ಕೆ ಸಾವಿಗೀಡಾಗಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಇದರೊಂದಿಗೆ ಈ ವರೆಗೆ ಮೃತಪಟ್ಟವರ ಸಂಖ್ಯೆ ೩೨೪ಕ್ಕೇರಿದೆ.

ಮತ್ತೆ ೧೬ ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಈವರೆಗೆ ೩,೬೦೪ ಮಂದಿಯಲ್ಲಿ ಕಪ್ಪು ಶಿಲೀಂಧ್ರ ಧೃಢ ಪಟ್ಟಿದೆ ಎಂದು ಹೇಳಲಾಗಿದೆ.

ಕಪ್ಪು ಶಿಲೀಂದ್ರದ ಜೊತೆಗೆ ಕರ್ನಾಟಕದಲ್ಲಿ ಕೊರೋನಾ ಸೋಂಕು ಸ್ಪಲ್ಪ ಏರಿಕೆಯಗಿದೆ. ಬೆಂಗಳೂರು ನಗರದಲ್ಲಿ ಈವರೆಗೆ ೧,೧೪೮ ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು ೧೧೦ ಮಂದಿ ಮೃತಪಟ್ಟಿದ್ದಾರೆ.

ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ೨೦೮, ಬೌರಿಂಗ್ ಆಸ್ಪತ್ರೆಯಲ್ಲಿ ೩೭೯, ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ನಾಲ್ವರು ಹಾಗೂ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಮೂವರು ಮಕ್ಕಳು ಸೇರಿದಂತೆ ನಗರದಲ್ಲಿ ೫೯೪ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ