ಹೊಸ ಬೆಳವಣಿಗೆ..ಯಡಿಯೂರಪ್ಪ ರಾಜೀನಾಮೆ ಸುಳಿವು ನೀಡಿದ ಬೆನ್ನಲ್ಲೇ ರಾಜೀನಾಮೆಗೆ ಮುಂದಾದ ವಲಸಿಗ ಸಚಿವರು..?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವ ಬದಲಾವಣೆ ವಿಷಯ ತೀವ್ರ ಸಂಚಲನ ಮೂಡಿಸಿರುವ ಸಂದರ್ಭದಲ್ಲೇ ಮತ್ತೊಂದು ಹೊಸ ಬೆಳವಣೆಗೆ ಸಾಧ್ಯತೆ ಕಂಡು ಬರುತ್ತಿದೆ. ಇದು ಎಷ್ಟರ ಮಟ್ಟಿಗೆ ನಿಜವಾಗಲಿದೆ ಎಂಬುದು ಶೀಘ್ರವೇ ಗೊತ್ತಾಗಲಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಸಭೆ ನಡೆಸಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದ ಬಂದು ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿರುವ ಏಳು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ.
ಇಂದು (ಗುರುವಾರ) ಸಂಜೆ) ನಡೆದ ಸಂಪುಟ ಸಭೆ ಮುಗಿದ ಬಳಿಕ ಸಚಿವರಾದ ಡಾ. ಕೆ.ಸುಧಾಕರ್, ಬಿ.ಸಿ.ಪಾಟೀಲ್, ಎಸ್.ಟಿ.ಸೋಮಶೇಖರ್, ಗೋಪಾಲಯ್ಯ, ಭೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್ ಪ್ರತ್ಯೇಕವಾಗಿ ಏಕಮಾದರಿ ಪತ್ರಗಳನ್ನು ಹಿಡಿದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಯಡಿಯೂರಪ್ಪ ರಾಜೀನಾಮೆ ನೀಡಿದರೆ ವಲಸಿಗ ಸಚಿವರೂ ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎಂದೇ ಹೇಳಲಾಗುತ್ತಿದೆ,
ಯಡಿಯೂರಪ್ಪ ಅವರ ನಾಯಕತ್ವ ಬದಲಾದರೆ ನಮ್ಮ ಮುಂದಿನ ಭವಿಷ್ಯ ಏನು ಎಂಬ ಆತಂಕ ವಲಸೆ ನಾಯಕರ ನಿರ್ಧಾರಕ್ಕೆ ಕಾರಣ ಎನ್ನಲಾಗುತ್ತಿದೆ.
ಇದೇ ಕಾರಣಕ್ಕೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು, ಆ ಮೂಲಕ ಎಲ್ಲವನ್ನೂ ಯಡಿಯೂರಪ್ಪನವರ ನಿರ್ಧಾರಕ್ಕೆ ಬಿಟ್ಟಿದ್ದಾರೆ ಎನ್ನಲಾಗುತ್ತಿದೆ.
ಆದರೆ ಇದನ್ನು ವಲಸಿಗ ಸಚಿವರ್ಯಾರೂ ದೃಢಪಡಿಸಿಲ್ಲ. ಮುಂದೆ ಯಾವರೀತಿ ಬೆಳವಣಿಗೆ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ. ಇದು ಒತ್ತಡ ತಂತ್ರವೋ ಅಥವಾ ಅವರು ನಿಜವಾಗಿಯೂ ರಾಜೀನಾಮೆ ನೀಡುತ್ತಾರೆಯೋ ಎಂಬುದು ಸ್ಪಷ್ಟವಾಗಿಲ್ಲ.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement