ಗಮನಿಸಿ… ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪತ್ರಿಕೆ-೧ರ ಕೀ ಉತ್ತರ ಪ್ರಕಟ

posted in: ರಾಜ್ಯ | 0

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರಕಾರ ಜುಲೈ ೧೯ ರಂದು ನಡೆಸಿದ್ದ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಪತ್ರಿಕೆ-೧ರ ಕೀ ಉತ್ತರಗಳನ್ನು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

ಕೊರೋನಾ ಸೋಂಕಿನ ಭೀತಿಯ ನಡುವೆಯೂ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಜುಲೈ ೧೯ ಮತ್ತು ಜುಲೈ ೨೨ ರಂದು ನಡೆಸಿದೆ. ಜುಲೈ ೧೯ ರಂದು ನಡೆಸಿದ ಮೊದಲ ದಿನದ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ವಿವಿಧ ವಿಷಯಗಳ ಕೀ ಉತ್ತರವನ್ನು ಪ್ರಕಟಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಜುಲೈ ೧೯ ರಂದು ನಡೆದ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ಮೊದಲ ಪತ್ರಿಕೆಯ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ ಮಾದರಿ ಉತ್ತರಗಳನ್ನು   https://sslc.karnataka.gov.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ  https://sslc.karnataka.gov.in ಜಾಲತಾಣಕ್ಕೆ ಭೇಟಿ ನೀಡಬೇಕು. ಈ ಜಾಲತಾಣದಲ್ಲಿ ದಾಖಲೆಗಳು ಎಂಬ ಕೆಟಗರಿ  ಕಾಣಿಸಲಿದೆ. ಅಲ್ಲಿ ಕ್ಲಿಕ್ ಮಾಡಿದರೆ ಎಸ್.ಎಸ್.ಎಲ್.ಸಿ. ಎಂಬ ಟ್ಯಾಬ್ ಕಾಣಲಿದೆ. ಆಲ್ಲಿ ನೀವು ಪ್ರಶ್ನೆ ಪತ್ರಿಕೆಗಳ ಮೇಲೆ ಕ್ಲಿಕ್ ಮಾಡಿದರೆ, ನಿಮಗೆ ಮತ್ತೊಂದು ಪುಟ ತೆರದುಕೊಳ್ಳಲಿದೆ. ಆ ಪುಟದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಮಾದರಿ ಉತ್ತರ ಜುಲೈ-೨೦೨೧ ಎನ್ನುವಲ್ಲಿ ಕ್ಲಿಕ್ ಮಾಡಿದರೆ, ನಿಮ್ಮ ವಿಷಯವಾರು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

ಪ್ರಮುಖ ಸುದ್ದಿ :-   ಬಿಜೆಪಿ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ : ಚಿತ್ರದುರ್ಗದಲ್ಲಿ ಹಾಲಿ ಸಂಸದರಿಗೆ ಕೊಕ್, ಯಡಿಯೂರಪ್ಪ ಆಪ್ತನಿಗೆ ಟಿಕೆಟ್‌

ಕೀ ಉತ್ತರಗಳನ್ನು ಡೌನ್ ಲೋಡ್ ಮಾಡಿಕೊಳ್ಳೂವಲ್ಲಿ ಗೊಂದಲ ಉಂಟಾದಲ್ಲಿ ವಿದ್ಯಾರ್ಥಿಗಳು ನೇರವಾಗಿ ನಿಮ್ಮ ಪತ್ರಿಕೆ-೧ರ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದಂತ ಮಾದರಿ ಉತ್ತರಗಳನ್ನು  https://sslc.karnataka.gov.in/new-page/July%202021%20SSLC%20Examination%20Multiple%20Choice%20Questions%20Answer%20key/kn ಈ ಲಿಂಕ್ ನಲ್ಲಿ ನೇರವಾಗಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

 

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement