ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು (ಗುರುವಾರ) ತಮ್ಮ ರಾಜೀನಾಮೆಯ ಸುಳಿವು ನೀಡಿದರೆ.? ಅವರ ಮಾತು ಇಂಥ ಸುಳಿವನ್ನು ನೀಡಿದಂತೆ ಕಾಣುತ್ತಿದೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 25ರ ನಂತರ ಪಕ್ಷದ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಯಾರೂ ನನ್ನ ಪರ ಪ್ರತಿಭಟನೆ ನಡೆಸುವುದು ಸರಿಯಲ್ಲ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಅಂತಿಮ. ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಜುಲೈ 26ರ ನಂತರದ ಹೈಕಮಾಂಡ್ ಸಂದೇಶಕ್ಕೆ ಕಾಯುತ್ತಿದ್ದೇನೆ ಎಂದು ತಿಳಿಸಿದರು.
ಕೆಲಸ ಮೆಚ್ಚಿ ವರಿಷ್ಠರು 75 ವರ್ಷ ಆದ ಬಳಿಕವೂ 78 ವರ್ಷದ ವರೆಗೂ ಅಧಿಕಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಮುಂದೆ ಪಕ್ಷ ಮತ್ತೆ ಅಧಿಕಾರಕ್ಕೆ ತರುವುದು ನನ್ನ ಸಂಕಲ್ಪ. ಜುಲೈ 25ಕ್ಕೆ ಸರ್ಕಾರದ ಎರಡು ವರ್ಷಗಳ ಸಾಧನೆ ಬಗ್ಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಬಳಿಕ ವರಿಷ್ಠರು ಏನು ಸೂಚಿಸುತ್ತಾರೆಯೋ ಅದರಂತೆ ನಡೆದುಕೊಳ್ಳುತ್ತೇನೆ. ವರಿಷ್ಠರ ತೀರ್ಮಾನವೇ ನನ್ನ ತೀರ್ಮಾನ ಎಂದು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ