ಹೌದು..ಎರಡು ತಿಂಗಳ ಹಿಂದೆಯೇ ರಾಜೀನಾಮೆಗೆ ಮುಂದಾಗಿದ್ದೆ: ಬಿಎಸ್‌ವೈ ಮತ್ತೊಂದು ಹೇಳಿಕೆ

ಬೆಂಗಳೂರು: ನಾನು ಎರಡು ತಿಂಗಳ ಹಿಂದೆಯೇ ರಾಜೀನಾಮೆಗೆ ಮುಂದಾಗಿದ್ದೆ ಎಂಬ ಹೇಳಿಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದಾರೆ.
ಗುರುವಾರ ಸಂಪುಟ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜುಲೈ 25ರಂದು ದೆಹಲಿ ಹೈಕಮಾಂಡಿನಿಂದ ಬರುವ ಸಂದೇಶಕ್ಕಾಗಿ ಕಾಯುತ್ತಿದೇನೆ. ಹೈಕಮಾಂಡ್ ಯಾವಾಗ ಬೇಡ ೆಂದು ಹೇಳುತ್ತದೆಯೋ ಅಂದೇ ರಾಜೀನಾಮೆ ನೀಡುತ್ತೇನೆ. ಬಿಜೆಪಿಯ ಕೇಂದ್ರದ ನಾಯಕತ್ವ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಮತ್ತೊಮ್ಮೆ ಪುನರುಚ್ಚರಿಸಿದರು.
ಬಿಜೆಪಿಯಲ್ಲಿ ಪರ್ಯಾಯ ನಾಯಕರು ಅನೇಕ ಜನರಿದ್ದಾರೆ. ಆದರೆ ನಾನು ಯಾರ ಹೆಸರನ್ನೂ ಹೈಕಮಾಂಡಿಗೆ ಶಿಫಾರಸ್ಸು ಮಾಡುವುದಿಲ್ಲ. ಮುಂದಿನ ನಾಯಕರನ್ನು ಆಯ್ಕೆ ಮಾಡುವುದು ಹೈಕಮಾಂಡಿಗೆ ಬಿಟ್ಟ ವಿಚಾರ. ಹೈಕಮಾಂಡ್ ಮುಂದಿನ ನಾಯಕರ ಬಗ್ಗೆ ನನ್ನ ಬಳಿ ಕೇಳಿದರೂ ನಾನು ಯಾರ ಹೆಸರನ್ನು ಸೂಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂಬುವುದು ನನ್ನ ಉದ್ದೇಶ. ಹೈಕಮಾಂಡ್ ಹೇಳುವ ಕೊನೆ ಕ್ಷಣದವರೆಗೂ ನನ್ನ ಕರ್ತವ್ಯ ನಿರ್ವಹಿಸುತ್ತೇನೆ. ರಾಜೀನಾಮೆ ನೀಡಿದ ಮರುಕ್ಷಣವೇ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದರು.
ಜುಲೈ 26ರಂದು ಬಿಜೆಪಿ ಸರ್ಕಾರ ರಚಿಸಿ ಎರಡು ವರ್ಷವಾಗಲಿದೆ. ಅಂದು ನಮ್ಮ ಸರ್ಕಾರದ ಎರಡು ವರ್ಷದ ಸಾಧನೆಯನ್ನು ಜನರ ಮುಂದಿಡುವ ಕೆಲಸ ಮಾಡಲಿದ್ದೇವೆ. ನಮ್ಮ ಕಾರ್ಯಕ್ರಮಗಳ ಕುರಿತ ಕೈಪಿಡಿಯನ್ನು ಹೊರ ತರಲಾಗುತ್ತದೆ ಎಂದರು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

 

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement