ಹೊಸ ಬೆಳವಣಿಗೆ..ಯಡಿಯೂರಪ್ಪ ರಾಜೀನಾಮೆ ಸುಳಿವು ನೀಡಿದ ಬೆನ್ನಲ್ಲೇ ರಾಜೀನಾಮೆಗೆ ಮುಂದಾದ ವಲಸಿಗ ಸಚಿವರು..?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವ ಬದಲಾವಣೆ ವಿಷಯ ತೀವ್ರ ಸಂಚಲನ ಮೂಡಿಸಿರುವ ಸಂದರ್ಭದಲ್ಲೇ ಮತ್ತೊಂದು ಹೊಸ ಬೆಳವಣೆಗೆ ಸಾಧ್ಯತೆ ಕಂಡು ಬರುತ್ತಿದೆ. ಇದು ಎಷ್ಟರ ಮಟ್ಟಿಗೆ ನಿಜವಾಗಲಿದೆ ಎಂಬುದು ಶೀಘ್ರವೇ ಗೊತ್ತಾಗಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಸಭೆ ನಡೆಸಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದ ಬಂದು ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿರುವ ಏಳು ಸಚಿವರು ತಮ್ಮ … Continued

ಹೌದು..ಎರಡು ತಿಂಗಳ ಹಿಂದೆಯೇ ರಾಜೀನಾಮೆಗೆ ಮುಂದಾಗಿದ್ದೆ: ಬಿಎಸ್‌ವೈ ಮತ್ತೊಂದು ಹೇಳಿಕೆ

ಬೆಂಗಳೂರು: ನಾನು ಎರಡು ತಿಂಗಳ ಹಿಂದೆಯೇ ರಾಜೀನಾಮೆಗೆ ಮುಂದಾಗಿದ್ದೆ ಎಂಬ ಹೇಳಿಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದಾರೆ. ಗುರುವಾರ ಸಂಪುಟ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜುಲೈ 25ರಂದು ದೆಹಲಿ ಹೈಕಮಾಂಡಿನಿಂದ ಬರುವ ಸಂದೇಶಕ್ಕಾಗಿ ಕಾಯುತ್ತಿದೇನೆ. ಹೈಕಮಾಂಡ್ ಯಾವಾಗ ಬೇಡ ೆಂದು ಹೇಳುತ್ತದೆಯೋ ಅಂದೇ ರಾಜೀನಾಮೆ ನೀಡುತ್ತೇನೆ. ಬಿಜೆಪಿಯ ಕೇಂದ್ರದ ನಾಯಕತ್ವ ತೆಗೆದುಕೊಳ್ಳುವ ನಿರ್ಧಾರಕ್ಕೆ … Continued

ಅಶ್ಲೀಲ ಚಿತ್ರಗಳ ತಯಾರಿಕೆ ಆರೋಪಿ ರಾಜ್ ಕುಂದ್ರಾ ಒಟ್ಟು ಆಸ್ತಿ ಮೌಲ್ಯ ೩೫೦ ಮಿಲಿಯನ್ ಡಾಲರ್..?

ಮುಂಬಯಿ: ಅಶ್ಲೀಲ ಚಿತ್ರಗಳ ತಯಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಈಗ ಪೊಲೀಸರ ವಶದಲ್ಲಿದ್ದು, ಹಲವು ಉದ್ಯಮಗಳನ್ನು ನಡೆಸುತ್ತಿರುವ ಅವರ ಒಟ್ಟು ಆಸ್ತಿ ಮೌಲ್ಯ ೩೫೦ ಮಿಲಿಯನ್ ಡಾಲರ್ ಎಂಬ ಮಾಹಿತಿ ಹೊರಬಿದ್ದಿದೆ. ಐಷಾರಾಮಿ ಜೀವನ ನಡೆಸುತ್ತಿರುವ ರಾಜ್ ಕುಂದ್ರಾ ಮತ್ತು ಶಿಲ್ಪಾ ಶೆಟ್ಟಿ ಅವರು ಅನೇಕ … Continued

ಮನೆ ಕನಸುಕಂಡ ಜನತೆಗೆ ಸಿಹಿ ಸುದ್ದಿ: 5 ಲಕ್ಷ ಮನೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ 4 ಲಕ್ಷ ಮನೆ ನಿರ್ಮಾಣ, ನಗರ ಪ್ರದೇಶದಲ್ಲಿ 1 ಲಕ್ಷ ಮನೆ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಮುಕ್ತಾಯಗೊಂಡ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸುಮಾರು … Continued

ಕರಾವಳಿ ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ, ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ವಿವಿಧೆಡೆ ಆರ್ಭಟ ಮುಂದುವರಿಸಿರುವ ಮಳೆ ಮುಂದಿನ 5 ದಿನಗಳ ಕಾಲ ಮುಂದುವರಿಯಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜು.23ರಂದು ಅತಿ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜು.24ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ, … Continued

ರಾಜ್ಯಸಭೆಯಲ್ಲಿ ಪೆಗಾಸಸ್ ಕುರಿತ ಅಶ್ವಿನಿ ವೈಷ್ಣವ್ ಹೇಳಿಕೆ ಕಸಿದುಕೊಂಡು ಹರಿದುಹಾಕಿದ ಟಿಎಂಸಿ ಸಂಸದ ಸಂತನು ಸೇನ್‌

ನವದೆಹಲಿ: ಪೆಗಾಸಸ್ ಸ್ಪೈವೇರ್ ವಿವಾದದ ಬಗ್ಗೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರ ಹೇಳಿಕೆಯನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸಂತನು ಸೇನ್ ಕಿತ್ತುಕೊಂಡು ಹರಿದು ಹಾಕಿದ ನಂತರ ನಂತರ ಗುರುವಾರ ರಾಜ್ಯಸಭೆಯಲ್ಲಿ ಗದ್ದಲ ಉಂಟಾಯಿತು. ಈ ವಿಷಯದ ಬಗ್ಗೆ ಹೇಳಿಕೆ ನೀಡಲು ಅಶ್ವಿನಿ ವೈಷ್ಣವ್ ಅವರನ್ನು ಕರೆಸಿದಾಗ ಟಿಎಂಸಿ ಮತ್ತು ಇತರ … Continued

ಕರ್ನಾಟಕದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಎರಡನೆ ದಿನವಾದ ಇಂದು (ಗುರುವಾರ) ಯಾವುದೇ ಗೊಂದಲವಿಲ್ಲದೆ ಸುಗಮವಾಗಿ ಪರೀಕ್ಷೆ ನಡೆಯಿತು. ಹೊಸ ಸ್ವರೂಪದಲ್ಲಿ ನಡೆದ ಪರೀಕ್ಷೆಯಲ್ಲಿ 4485 ಪರೀಕ್ಷಾ ಕೇಂದ್ರಗಳಲ್ಲಿ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಇಂದು ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಗಳ ಪರೀಕ್ಷೆ ಬರೆದರು. ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ … Continued

ಗಮನಿಸಿ… ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪತ್ರಿಕೆ-೧ರ ಕೀ ಉತ್ತರ ಪ್ರಕಟ

posted in: ರಾಜ್ಯ | 0

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರಕಾರ ಜುಲೈ ೧೯ ರಂದು ನಡೆಸಿದ್ದ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಪತ್ರಿಕೆ-೧ರ ಕೀ ಉತ್ತರಗಳನ್ನು ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಕೊರೋನಾ ಸೋಂಕಿನ ಭೀತಿಯ ನಡುವೆಯೂ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಜುಲೈ ೧೯ ಮತ್ತು ಜುಲೈ ೨೨ ರಂದು ನಡೆಸಿದೆ. ಜುಲೈ ೧೯ … Continued

ನಾಳೆ ಗುರುಪೂಜಾ ಉತ್ಸವ

ಹುಬ್ಬಳ್ಳಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಶೋಕ ನಗರ ಶಾಖೆ ಹಾಗೂ ವಿದ್ಯಾರಣ್ಯ ತರುಣ ಉದ್ಯೋಗಿ ಪ್ರಭಾತ ಶಾಖೆ ಸಹಯೋಗದಲ್ಲಿ ಗುರು ಪೂಜಾ ಉತ್ಸವ ವಿಜಯ ನಗರದ ಕೆಂಪಣ್ಣವರ ಕಲ್ಯಾಣ ಮಂಟಪದಲ್ಲಿ ಜುಲೈ 23ರಂದು ಬೆಳಿಗ್ಗೆ 7:15ಕ್ಕೆ ನಡೆಯಲಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಅವರಿಂದ ಬೌದ್ಧಿಕವಿದೆ. … Continued

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ಗೆ ೩೨೪ ಮಂದಿ ಸಾವು

posted in: ರಾಜ್ಯ | 0

ಬೆಂಗಳೂರು: ಕೊರೋನಾ ಸೋಂಕು ರಾಜ್ಯದಲ್ಲಿ ತನ್ನ ಏರಿಳಿತ ಮುಂದುವರೆಸಿದ್ದು, ಅದರ ನಡುವೆಯೇ ಬ್ಲ್ಯಾಕ್ ಫಂಗಸ್ ಕೂಡ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಕಪ್ಪು ಶಿಲೀಂದ್ರ ಸೋಂಕಿಗೆ ರಾಜ್ಯದಲ್ಲಿ ಒಟ್ಟು ೩೨೪ ಜನರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ ಹನ್ನೊಂದು ಜನರು ಕಪ್ಪು ಶಿಲೀಂದ್ರಕ್ಕೆ ಸಾವಿಗೀಡಾಗಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಇದರೊಂದಿಗೆ ಈ … Continued