ಶಿರಸಿ ತಾಲೂಕಿನಲ್ಲಿ ದಾಖಲೆಯ 24 ಸೆಂಮೀ ಮಳೆ, ಉಕ್ಕಿದ ನದಿಗಳು, ತೋಟ-ಗದ್ದೆಗಳು ಜಲಾವೃತ

ಶಿರಸಿ: ಕಳೆದ ಇಪ್ಪತ್ನಾಲ್ಕು ತಾಸುಗಳ ಅವಧಿಯಲ್ಲಿ ತಾಲ್ಲೂಕಿನಲ್ಲಿ 24 ಸೆಂಮೀ. ಮಳೆ ಸುರಿದಿದೆ. ನದಿ, ಕೊಳ್ಳಗಳು ಭರ್ತಿಯಾಗಿದ್ದು ಹಲವೆಡೆ ತೋಟ, ಗದ್ದೆಗಳು ಜಲಾವೃತಗೊಂಡಿವೆ.
ಮಾರಿಗದ್ದೆ, ಸರಕುಳಿ, ಮಾದ್ನಕಳ ಸೇತುವೆಗಳ ಮೇಲೆ ನದಿ ನೀರು ರಭಸವಾಗಿ ಹರಿಯುತ್ತಿರುವುದರಿಂದ ಶಿರಸಿ ಹಾಗೂ ಸಿದ್ದಾಪುರ ತಾಲ್ಲೂಕುಗಳ ನಡುವಿನ ಸಂಪರ್ಕ ಸ್ಥಗಿತಗೊಂಡಿದೆ. ಪಟ್ಟಣಹೊಳೆ, ಕೆಂಗ್ರೆ ಹೊಳೆಯೂ ಉಕ್ಕಿ ಹರಿಯುತ್ತಿದ್ದು ಸಂಚಾರ ಸ್ಥಗಿತಗೊಂಡಿದೆ.
ಕಕ್ಕಳ್ಳಿ-ವಾನಳ್ಳಿ ನಡುವಿನ ರಸ್ತೆಯಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಉರುಳಿವೆ. ಗ್ರಾಮೀಣ ಭಾಗದ ಬಹುತೇಕ ಕಡೆಗಳಲ್ಲಿ ವಿದ್ಯುತ್, ದೂರವಾಣಿ ಸಂಪರ್ಕ ಕಡಿತಗೊಂಡಿದೆ.
ಶಿವಳ್ಳಿ ಗ್ರಾಮ ಪಂಚಾಯ್ತಿಯ ಚಿಂಚಳಿಕೆ ಗ್ರಾಮದಲ್ಲಿ ಕೆರೆ ಒಡ್ಡು ಒಡೆದ ಪರಿಣಾಮ ಭತ್ತದ ಗದ್ದೆಗಳು ಮುಳುಗಡೆಯಾಗಿದೆ. ನಾಟಿ ಭತ್ತದ ಸಸಿಗಳು ತೇಲಿಹೋಗಿವೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement