ಆಲಮಟ್ಟಿ ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

ವಿಜಯಪುರ : ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಕೃಷ್ಣೆ ಆಲಮಟ್ಟಿ ಲಾಲ ಬಹದ್ದೂರ ಶಾಸ್ತ್ರಿ ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಲಾಲ್ ಬಹಾದ್ದೂರ್ ಶಾಸ್ತ್ರೀ ಜಲಾಶಯದ ಎಲ್ಲ 26 ಗೇಟ್ ತೆರೆದು ಕೃಷ್ಣಾ ನದಿಗೆ 2,57,000 ಕ್ಯೂಸೆಕ್ ನೀರು ಹರಿ ಬಿಡಲಾಗುತ್ತಿದೆ. ಇದಲ್ಲದೇ ಆಲಮಟ್ಟಿ ಕೆಪಿಸಿಎಲ್ ಜಲ ವಿದ್ಯುತ್ ಘಟಕಕ್ಕೆ 42,500 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಮಹರಾಷ್ಟ್ರದಲಿ ಭಾರು ಮಳೆಯಾಗುತ್ತಿದ್ದು, ಹೀಗಾಗಿ ಆಲಮಟ್ಟಿ ಜಲಾಶಯಕ್ಕೆ ಇಳಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ.ಹೀಗಾಗಿ ಆಲಮಟ್ಟಿ ಲಾಲ ಬಹಾದ್ದೂರ ಶಾಸ್ತ್ರಿ ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರನ್ನು ನದಿಪಾತ್ರಕ್ಕೆ ಹೊರಬಿಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement