ಬಿಎಸ್​ವೈ-ಬಿಜೆಪಿ ಹೈಕಮಾಂಡ್ ನಡುವೆ 2 ವರ್ಷದ ಒಪ್ಪಂದ ಆಗಿತ್ತು. ಇದು ಬಿಜೆಪಿ ಸಂಸದರೇ ಹೊರಹಾಕಿದ ಮಾಹಿತಿ

ಚಾಮರಾಜನಗರ: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಕ್ಷಣಕ್ಕೊಂದು ಹೊಸ ಬೆಳವಣಿಗೆ ಕಾಣುತ್ತಿದೆ.
ಶುಕ್ರವಾರ ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ ಈಗ ಮತ್ತೊಂದು ಮಾಹಿತಿ ಹೊರಹಾಕಿದ್ದಾರೆ.
ಮುಖ್ಯಮಂತ್ರಿ ಸ್ಥಾನ ಕುರಿತು ಹೈಕಮಾಂಡ್ ಮತ್ತು ಬಿ.ಎಸ್​.ಯಡಿಯೂರಪ್ಪ ನಡುವೆ 2 ವರ್ಷಕ್ಕೆ ಒಪ್ಪಂದ ಆಗಿತ್ತು. ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಾಗಲೇ ಈ ಒಪ್ಪಂದ ಆಗಿತ್ತು ಎಂದು ಹೇಳಿದ್ದಾರೆ.
ಮುಖ್ಯ ಹುದ್ದೆಯಲ್ಲಿ 75 ವರ್ಷ ಮೇಲ್ಪಟ್ಟವರು ಇರಬಾರದು ಎಂಬದು ಬಿಜೆಪಿ ಪಕ್ಷದ ನಿಲುವಾಗಿದೆ. ನಿಮಗೆ ವಯಸ್ಸಾಗಿದ್ದರೂ ಮುಖ್ಯಮಂತ್ರಿ ಆಗುವ ಅವಕಾಶ ಕೊಡುತ್ತೇವೆ. ಎರಡು ವರ್ಷದ ಬಳಿಕ ನೀವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಹೈಕಮಾಂಡ್ ಅಂದೇ ಹೇಳಿತ್ತು . ವಿಶೇಷ ಸಂದರ್ಭದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆದರುಒಪ್ಪಂದದ ಪ್ರಕಾರ ಯಡಿಯೂರಪ್ಪ ಅವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ಇದುವರೆಗಿದ್ದ ಉಹಾಪೋಹಕ್ಕೆ ತೆರೆಬಿದ್ದಿದೆ. ಯಡಿಯೂರಪ್ಪ ಮತ್ತು ಹೈಕಮಾಂಡ್ ನಡುವೆ ಆಗಿದ್ದ ಮಾತುಕತೆಯಂತೆ ಯಡಿಯೂರಪ್ಪ ನಡೆದುಕೊಂಡಿದ್ದಾರೆ.ಇದು ಈಗ ಒಂದು ಹಂತಕ್ಕೆ ಬಂದಿದೆ ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement