ರಾಜ್ಯದಲ್ಲಿ ಪ್ರವಾಹ ಭೀತಿ : ಜಿಲ್ಲಾಧಿಕಾರಿಗಳೊಂದಿಗೆ ಪರಿಸ್ಥಿತಿ ಅವಲೋಕಿಸಿದ ಸಿಎಂ ಬಿಎಸ್‌ವೈ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು (ಶುಕ್ರವಾರ) ಹೆಚ್ಚು ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ಪ್ರವಾಹ ಪೀಡಿತ ಗ್ರಾಮಗಳ ಜನರನ್ನು ಶೀಘ್ರವೇ ಸುರಕ್ಷಿತ ಸ್ಥಳಗಳಿಗೆ ತೆರುವುಗೊಳಿಸಲು ಸೂಚಿಸಿದರು.
ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳ ಜನರನ್ನು ಸಹ ಮುನ್ನೆಚ್ಚರಿಕೆ ದೃಷ್ಟಿಯಿಂದ ಸ್ಥಳಾಂತರಿಸಲು ಸೂಚಿಸಿದರು. ಎನ್ ಡಿಅರ್ ಎಫ್ ಮತ್ತು ಎಸ್ ಡಿ ಆರ್ ಎಫ್ ತಂಡಗಳನ್ನು ಅಗತ್ಯ ಇರುವ ಜಿಲ್ಲೆಗಳಿಗೆ ತುರ್ತು ಕಳುಹಿಸಲು ಸೂಚಿಸಲಾಯಿತು
ಜನರಿಗೆ ಅನುಕೂಲ ಒದಗಿಸಲು ಕಾಳಜಿ ಕೇಂದ್ರಗಳನ್ನು ತೆರೆದು ಜನರಿಗೆ ಸಿದ್ಧವಾಗಿರಲು ಸೂಚಿಸಲಾಯಿತು. ಅಧಿಕಾರಿಗಳು ರಜೆ ಹಾಕದೆ ಕೆಲಸ‌ ಮಾಡಬೇಖು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದರು. ಹಣಕಾಸಿನ‌ ನೆರವು ಅಗತ್ಯವಿದ್ದಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಇನ್ನು ಸೇನಾ ಹೆಲಿಕಾಪ್ಟರ್ ಗಳನ್ನು‌ ಬಳಸಲು ಅನುಕೂಲವಾಗುವಂತೆ ಸಜ್ಜಾಗಿರಲು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಂದಿನ‌ 48 ತಾಸುಗಳ ಕಾಲ ಏನಾಗಬಹುದೆಂದು ತಿಳಿದು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಿದರು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement