ಜುಲೈ 24 ರಿಂದ ಸ್ವರ್ಣವಲ್ಲಿ ಶ್ರೀಗಳ  ಚಾತುರ್ಮಾಸ್ಯ ವ್ರತ ಆರಂಭ

ಶಿರಸಿ: ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಚಾತುರ್ಮಾಸ್ಯ ವ್ರತಾಚರಣೆ ಜುಲೈ 24 ರಿಂದ ಸಪ್ಟೆಂಬರ್ 20ರವರೆಗೆ ನಡೆಯಲಿದೆ.ಜುಲೈ 24ರಂದು ಬೆಳಗ್ಗೆ ಶ್ರೀ ವೇದವ್ಯಾಸ ಪೂಜೆ ನೆರವೇರಿಸಿ ಶ್ರೀಗಳವರು ಚಾತುರ್ಮಾಸ್ಯ ವ್ರತದ ಸಂಕಲ್ಪ ಕೈಗೊಳ್ಳಲಿದ್ದಾರೆ.
ಮಧ್ಯಾಹ್ನ 3ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಮತ್ತು ಮಂಡಳಿ ಸದಸ್ಯ ಸುಬ್ರಾಯ ಹೆಗಡೆ ಗೌರಿ ಬಣಗಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸ ವೇ. ವಿಶ್ವೇಶ್ವರ ಭಟ್ಟ ಕೆರೇಕೈ ಮತ್ತು ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಆರ್. ಎಸ್. ಹೆಗಡೆ ಬೈರುಂಬೆ ಅವರನ್ನು ಸನ್ಮಾನಿಸಲಾಗುತ್ತಿದೆ.
ಭಕ್ತಾದಿಗಳು ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಕೋವಿಡ್ ವೈರಸ್ ನಿಯಂತ್ರಣ ಸಲುವಾಗಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಮತ್ತು ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗಿದೆ ಶ್ರೀಮಠದ ಆಡಳಿತ ಮಂಡಳಿ ಅಧ್ಯಕ್ಷ ವಿಘ್ನೇಶ್ವರ ಹೆಗಡೆ ಬೊಮ್ಮನಳ್ಳಿ ತಿಳಿಸಿದ್ದಾರೆ.ಈ ಅವಧಿಯಲ್ಲಿ ಪ್ರತಿದಿನ ಸಂಜೆ ಮಹಾಭಾರತ ಪ್ರವಚನ ಏರ್ಪಡಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement