ಪ್ರವಾಹ ಪರಿಸ್ಥಿತಿ, ಬಿಎಸ್‌ವೈ ಪರ ಸ್ವಾಮೀಜಿಗಳ ಪ್ರದರ್ಶನ:ಆದ್ರೂ ಹೈಕಮಾಂಡಿನಿಂದ ನಾಳೆಯೇ ಸಂದೇಶವೂ? ಬಿಸಿ ತಣ್ಣಗಾಗುವ ವರೆಗೆ ವಿಳಂಬವೋ..?

posted in: ರಾಜ್ಯ | 0

ಬೆಂಗಳೂರು: ಹೈಕಮಾಂಡ್‍ನಿಂದ ನಾಳೆ (ಜುಲೈ 25) ಸೂಚನೆ ಬಂದ ನಂತರ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆದರೆ ಅವರ ನಡೆ ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ. ಯಡಿಯೂರಪ್ಪ ಪರವಾಗಿ ನಾಳೆಯೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸ್ವಾಮೀಜಿಗಳ ಸಮಾವೇಶ ನಡೆಯಲಿದೆ. ಸುಮಾರು ಒಂದು ಸಾವಿರ ಸ್ವಾಮೀಜಿಗಳು ಸೇರಿಲಿದ್ದಾರೆ ಎಂದು ಹೇಳಲಾಗಿದೆ. ಯಡಿಯೂರಪ್ಪ ಅವರನ್ನು ಮುಂದುವರಿಸಲು ಭಾರೀ ಒತ್ತಾಯ ಕೇಳಿಬರುತ್ತಿದೆ. ಮತ್ತೊಂದೆಡೆ ರಾಜ್ಯಕ್ಕೆ ಭಾರಿ ಮಳೆಯಿಂದ ಪ್ರವಾಹದ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿ ದೆಹಲಿ ವರಿಷ್ಠರು ಒಂದಿಷ್ಟು ದಿನಗಳ ಕಾಲ ಈ ಪ್ರತಿಭಟನೆ ಬಿಸಿ ಕಾದುನೋಡುವ ತಂತ್ರ ಅನುಸರಿಸುವ ಸಂಭವವಿದೆ ಎಂದೂ ಬಿಜೆಪಿ ಕೆಲಮೂಲಗಳು ಹೇಳುತ್ತವೆ.
ಹೀಗಾಗಿ ನಾಳೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜೀನಾಮೆ ನೀಡುವಂತೆ ಖಡಕ್‌ ಸೂಚನೆ ಬರುವ ಸಾಧ್ಯತೆ ಕಡಿಮೆ, ಇದನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡಿ ಈಗ ಯಡಿಯೂರಪ್ಪ ರಾಜೀನಾಮೆ ಸುದ್ದಿಯಿಂದ ಉದ್ಭವಿಸಿದ ಪರಿಸ್ಥಿತಿ ತಿಳಿಗೊಂಡ ನಂತರ ಕೇಂದ್ರದಿಂದ ಯಡಿಯೂರಪ್ಪ ಅವರಿಗೆ ಸೂಚನೆ ಬರಬಹುದು ಎಂದು ಹೇಳಲಾಗುತ್ತಿದೆ.
ಆದರೆ ಬಿಜೆಪಿಯ ಮತ್ತೊಂದು ಮೂಲವು ಬಿಜೆಪಿ ಹೈಕಮಾಂಡ್‌ ಯಡಿಯೂರಪ್ಪ ಅವರಿಗೆ ನಾಳೆಯೇ ರಾಜೀನಾಮೆ ನೀಡುವಂತೆ ಸೂಚನೆ ನೀಡಬಹುದು ಎಂದು ಹೇಳುತ್ತಾರೆ. ಸೂಚನೆ ಬಂದ ಸೋಮವಾರ (ಜುಲೈ26) ರಾಜಭವನಕ್ಕೆ ತೆರಳಿ ರಾಜ್ಯಪಾಲ ತಾವರ್ ಚಂದ್ರ ಗೆಲ್ಹೋಟ್ ಅವರಿಗೆ ರಾಜೀನಾಮೆ ಪತ್ರವ ಸಲ್ಲಿಸಬಹುದು ಎಂದು ಹೇಳುತ್ತವೆ.
ರಾಜೀನಾಮೆ ನೀಡಲು ಕ್ಷಣಗಣನೆ ಆರಂಭವಾಗಿದ್ದರೂ ವಿಚಲಿತರಾಗದ ಯಡಿಯೂರಪ್ಪನವರು ಎಂದಿನಂತೆ ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಿರುವುದು ಈಗ ಬಿಜೆಪಪಿಲ್ಲಿಯೇ ಅನೇಕರ ಕುತೂಹಲ ಹಾಗೂ ಅಚ್ಚರಿಗೆ ಕಾರಣವಾಗಿದೆ. ಶನಿವಾರ ಕೂಡ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಮಳೆ ಪರಿಸ್ಥಿತಿ ಸಂಬಂದ ಕೆಲವು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ದೂರವಾಣಿ ಮೂಲಕ ಚರ್ಚಿಸಿ ಜಿಲ್ಲಾ ಕೇಂದ್ರಗಳಲ್ಲಿಯೇ ಉಳಿಯುವಂತೆ ಸೂಚನೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ವರ್ಚುವಲ್ ಮೂಲಕ ನೆರವೇರಿಸಿದ್ದಾರೆ. ಅಲ್ಲದೆ ,ಅಲ್ಲದೆ ಜುಲೈ 25ರಂದು ಬೆಳಗಾವಿ ಜಿಲ್ಲೆ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಹೋಗುವುದಾಗಿ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್‌ ಮಾಡಿದ್ದಾರೆ. ಪ್ರವಾಹದಿಂದ ಉಂಟಾಗಿರುವ ಸ್ಥಳಗಳಲ್ಲಿ ವೈಮಾನಿಕ ಸಮೀಕ್ಷೆ ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಸಮಗ್ರ ವರದಿಗಳನ್ನು ಪಡೆಯುವುದಾಗಿ ತಿಳಿಸಿದ್ದಾರೆ.
ಇದನ್ನೆಲ್ಲ ಗಮನಿಸಿದರೆ ರಾಜ್ಯದಲ್ಲಿ ಪ್ರವಾಹದಂಥ ಎದುರಿಸುತ್ತಿರುವ ಪರಿಸ್ಥಿತಿಯಲ್ಲಿ ನಾಳೆಯೇ ಯಡಿಯೂರಪ್ಪ ಅವರಿಗೆ ರಾಜೀನಾಮೆ ನೀಡಿ ಎಂಬ ಸಂದೇಶ ರವಾನಿಸುವ ಸಾಧ್ಯತೆಗಳು ಕಡಿಮೆ ಎಂದು ಕೆಲಮೂಲಗಳು ಹೇಳುತ್ತವೆ. ಆದರೆ ಬಿಜೆಪಿ ಹೈಕಮಾಂಡ್‌ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದು ಗುಟ್ಟಾಗಿಯೇ ಉಳಿದಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ