ನಾಳೆಯಿಂದ ಕರ್ನಾಟಕದಲ್ಲಿ ಕಾಲೇಜುಗಳು ಓಪನ್, ಮಾರ್ಗಸೂಚಿಗಳು ಇಲ್ಲಿವೆ

ಬೆಂಗಳೂರು: ನಾಳೆಯಿಂದ (ಜುಲೈ 26 ) ರಾಜ್ಯಾದ್ಯಂತ ಪದವಿ ಕಾಲೇಜುಗಳು ಆರಂಭವಾಗುತಿದ್ದು, ಲೇಜುಗಳು ಮತ್ತೆ ವಿದ್ಯಾರ್ಥಿಗಳಿಗೆ ಬಾಗಿಲು ತೆರೆದಿವೆ.

ಕೋವಿಡ್ ಮೊದಲನೇ ಮತ್ತು ಎರಡನೇ ಅಲೆಯ ಆರ್ಭಟದಲ್ಲಿ ಮನೆಗಳಲ್ಲೇ ಉಳಿದುಹೋಗಿದ್ದ ವಿದ್ಯಾರ್ಥಿಗಳು ಈಗ ಕಾಲೇಜಿಗೆ ತೆರಳಲು ಸಜ್ಜಾಗಿದ್ದಾರೆ.

ರಾಜ್ಯದಲ್ಲಿ ಹಂತಹಂತವಾಗಿ ಶಾಲಾ ಕಾಲೇಜುಗಳನ್ನು ತೆರೆಯಲಾಗುತ್ತದೆ ಎಂದು ಈಗಾಗಲೇ ರಾಜ್ಯ ಸರ್ಕಾರ ತಿಳಿಸಿದೆ. ಇದರಲ್ಲಿ ಮೊದಲ ಹಂತವಾಗಿ ನಾಳೆಯಿಂದ ಕಾಲೇಜುಗಳು ತೆರೆಯಲಿವೆ. ಕೆಲ ಸಮಯದವರಗೆ ಕಾಲೇಜುಗಳಲ್ಲಿ ತರಗತಿಗಳು ನಡೆಯುವ ಬಗೆ, ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಮತ್ತು ಕೋವಿಡ್ ಪ್ರಸರಣ ಎಲ್ಲವನ್ನೂ ಗಮನಿಸಿ ನಂತರ ಮುಂದಿನ ಹಂತವಾಗಿ ಪಿಯುಸಿ ಮತ್ತು ಹೈಸ್ಕೂಲ್ ವಿದ್ಯಾರ್ಥಿಗಳ ತರಗತಿ ಪ್ರಾರಂಭಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.
ರಾಜ್ಯದಲ್ಲಿ ನಾಳೆಯಿಂದ ಪದವಿ ಕಾಲೇಜುಗಳು ಪುನರಾರಂಭಗೊಳ್ಳಲಿವೆ. ಆದರೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಇಬ್ಬರಿಗೂ ಸಾಕಷ್ಟು ನಿಯಮಗಳನ್ನು ರೂಪಿಸಲಾಗಿದೆ. ಯಾವುದೇ ಕಾರಣಕ್ಕೂ ನಿಯಮಗಳನ್ನು ತಪ್ಪಿಸದೆ ಕಾಲೇಜಿಗೆ ತೆರಳಲು ಸೂಚಿಸಲಾಗಿದೆ.
ಲಸಿಕೆ ಪಡೆದ ವಿದ್ಯಾರ್ಥಿಗಳಷ್ಟೇ ಕಾಲೇಜಿಗೆ ಬರಲು ಅವಕಾಶವಿರುತ್ತದೆ. ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಆರ್‌ಟಿ-ಪಿಸಿಆರ್ (RT-PCR) ಟೆಸ್ಟ್ ಕಡ್ಡಾಯ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ ಎಂದು ತಿಳಿಸಲಾಗಿದೆ. ವಿದ್ಯಾರ್ಥಿಗಳು ಕಾಲೇಜುಗಳಿಗೆ ಬರದಿದ್ದರೂ ಪ್ರಾಧ್ಯಾಪಕರು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕು.
ಸುಮಾರು ಮೂರು ತಿಂಗಳ ಬಳಿಕ ಕಾಲೇಜುಗಳನ್ನು ತೆರೆಯಲಾಗುತ್ತಿದೆ. ಕಾಲೇಜುಗಳನ್ನ ಕಡ್ಡಾಯವಾಗಿ ತೆರೆಯಲು ವಿಶ್ವ ವಿದ್ಯಾಲಯಗಳು ಸೂಚನೆ ನೀಡಿವೆ. . ಕೊವಿಡ್ ಮಾರ್ಗಸೂಚಿ ಅನುಸರಿಸಿ ನಾಳೆಯಿಂದ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ ಭೌತಿಕ ತರಗತಿ ಆರಂಭವಾಗಲಿದೆ.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

ಜುಲೈ 26ರಿಂದ ರಾಜ್ಯಾದ್ಯಂತ ಪದವಿ ಕಾಲೇಜುಗಳು ಪುನರಾರಂಭ; ಮಾರ್ಗಸೂಚಿಗಳು ಹೀಗಿವೆ

* ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕನಿಷ್ಠ ಒಂದು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು.
* ಲಸಿಕೆ ಪಡೆಯದ ವಿದ್ಯಾರ್ಥಿಗಳಿಗೆ ಕಾಲೇಜಿಗೆ ಪ್ರವೇಶ ಇಲ್ಲ.
* ಕಾಲೇಜು ಪ್ರಾರಂಭವಾದರೂ ಆನ್​ಲೈನ್​ ತರಗತಿಗಳು ಎಂದಿನಂತೆ ನಡೆಯಲಿದೆ.

*ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ
* ಪ್ರಾಧ್ಯಾಪಕರಿಗೆ ಮಾತ್ರ ಹಾಜರಾತಿ ಕಡ್ಡಾಯ* ಸ್ವ ಇಚ್ಛೆಯಿಂದ ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕು.
* ಅಧ್ಯಾಪಕರ ವರ್ಗ ಮತ್ತು ಸಿಬ್ಬಂದಿ ವರ್ಗ ಕಡ್ಡಾಯವಾಗಿ ಒಂದು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು.
* ಪ್ರತಿ ಕಾಲೇಜಿನಲ್ಲೂ ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿ ಪಾಲಿಸಬೇಕು.
* ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ನಿತ್ಯ ಥರ್ಮಲ್ ಸ್ಕ್ರೀನಿಂಗ್ ನಡೆಸಬೇಕು.
* ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಕಾಲೇಜು, ಕ್ಯಾಂಪಸ್​ನಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
* ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಾಲೇಜು ಆಡಳಿತ ಮಂಡಳಿ ಕ್ರಮಕೈಗೊಳ್ಳಬೇಕು.
* ಕಾಲೇಜು, ವಿವಿ ಆವರಣದಲ್ಲಿ ಆರೋಗ್ಯ ಸಹಾಯವಾಣಿ ಪ್ರಾರಂಭ ಮಾಡಬೇಕು.
* ಕಾಲೇಜು, ವಿವಿಗಳಲ್ಲಿ ಈಜುಕೊಳಗಳ ಪ್ರಾರಂಭಕ್ಕೆ ನಿಷೇಧ.
* ಗ್ರಂಥಾಲಯಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚನೆ
* ಕ್ರೀಡಾ ಚಟುವಟಿಕೆಗಳಿಗೆ ಸರ್ಕಾರ ನಿಗದಿ ಮಾಡಿರುವ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement