ಹೈಕಮಾಂಡ್ ಸಂದೇಶಕ್ಕೆ ಕಾದು ನೋಡೋಣ ಎಂದ ಸಿಎಂ: ನಾಳೆ ಉತ್ತರ ಕನ್ನಡ ಜಿಲ್ಲೆ ಪ್ರವಾಹ ಹಾನಿ ಪರಿಶೀಲನೆಗೆ ಹೊರಟ ಬಿಎಸ್‌ ವೈ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಹಾನಿ ಪರಿಶೀಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ (ಜುಲೈ 26) ಉತ್ತರ ಕನ್ನಡ ಜಿಲ್ಲೆಗೆ ಭೇಟಿ ಪ್ರವಾಹ ಪರಿಸ್ಥಿತಿ ಪರಿಶೀಲಿಸುತ್ತೇನೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಬಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹೇಳಿಕೆ ನೀಡಿದ್ದಾರೆ.
ಹೈಕಮಾಂಡ್‌ನಿಂದ ಸಂದೇಶ ಬರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾದು ನೋಡೋಣ, ಕಾದು ನೋಡೋಣ ಎಂದಷ್ಟೇ ಹೇಳಿದರು. ಹಾಗೂ ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಹಾನಿ ಪರಿಶೀಲಿಸುವ ಮಾತನ್ನು ಆಡಿದ್ದಾರೆ.
ನಮ್ಮ ಪಕ್ಷದಲ್ಲಿ ನಾನೊಬ್ಬನೇ ನಾಯಕಅಲ್ಲ. ಅನೇಕ ಹಿರಿಯ ನಾಯಕರಿದ್ದಾರೆ. ಹೈಕಮಾಂಡಿನ ನಾಯಕತ್ವದ ತೀರ್ಮಾನಕ್ಕೆ ಬದ್ಧವಾಗಿ ಕೆಲಸ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲೂ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
‘ನೂರು ಜನರಂತಹ ಸಿದ್ದರಾಮಯ್ಯ ಬಂದರೂ ನಾವು ಅಧಿಕಾರಕ್ಕೆ ಬರುವುದನ್ನು ತಡೆಯಲಾಗುವುದಿಲ್ಲ.’ಸಿದ್ದರಾಮಯ್ಯ ಹೇಳಿಕೆಗಳಿಗೆ ಪ್ರತಿಕ್ರಿಯೆ‌ ಕೊಡುವುದಕ್ಕೆ ಬಯಸುವುದಿಲ್ಲ. ಪಕ್ಷವನ್ನು ಮುಂದೆಯೂ ಅಧಿಕಾರಕ್ಕೆ ತರುವುದೊಂದೇ ನನ್ನ ಗುರಿಯಾಗಿದೆ’ ಎಂದರು.
ಇದಕ್ಕೂ ಮೊದಲು ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದರು.ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್.ಅಶೋಕ್, ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement