ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಯಡಿಯೂರಪ್ಪ ಬಂಪರ್ ಕೊಡುಗೆ :ತುಟ್ಟಿ ಭತ್ಯೆ ಮತ್ತೆ ಹೆಚ್ಚಳ..!

posted in: ರಾಜ್ಯ | 0

ಬೆಂಗಳೂರು :

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಹಿ ಸುದ್ದಿ ಕೊಟ್ಟಿದ್ದು, ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಿರುವ ಸಿಎಂ ಯಡಿಯೂರಪ್ಪ, ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.11.25 ರಿಂದ ಶೇ.21.50ಕ್ಕೆ ಹೆಚ್ಚಿಸಲು ಅನುಮತಿ ನೀಡಿದ್ದರು.ಈಗ ಜುಲೈ 1ರಿಂದ ಅನ್ವಯವಾಗುವಂತೆ ಆದೇಶ ಹೊರಡಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನು ( Dearness Allowance ) ಶೇ.11.25ರಿಂದ ಶೇ.21.50ಕ್ಕೆ ಹೆಚ್ಚಳ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ತುಟ್ಟಿಭತ್ಯೆ ದರಗಳು ಜುಲೈ.1, 2021ರಿಂದ ಜಾರಿಗೆ ಬರುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಈ ಕುರಿತು ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಉಮಾ.ಕೆ ನಡವಳಿಗಳನ್ನು ಹೊರಡಿಸಿದ್ದು, ದಿನಾಂಕ 01-01-2020 ರಿಂದ ದಿನಾಂಕ 30-06-2021ರ ಅವಧಿಯ ಹೆಚ್ಚುವರಿ ತುಟ್ಟಿ ಭತ್ಯೆ (DA ) ಕಂತುಗಳನ್ನು ಬಿಡುಗಡೆಗೊಳಿಸಲು ರಾಜ್ಯ ಸರ್ಕಾರವು ಹರ್ಷಿಸುತ್ತದೆ. ಅದರಂತೆ 1ನೇ ಜುಲೈ 2021ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ನೀಡಲಾಗುವ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡಾ 11.25 ರಿಂದ ಶೇಕಡಾ 21.50ಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯ ಸರ್ಕಾರದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜುಲೈ 2021ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ, ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 11.25 ರಿಂದ ಶೇ.21.50ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ ಎಂದು ತಿಳಿಸಿದ್ದಾರೆ.
ಡಿಎ ಹೆಚ್ಚಳದಿಂದ 6 ಲಕ್ಷ ಸರ್ಕಾರಿ ನೌಕರರು, 4.5 ಲಕ್ಷ ಪಿಂಚಣಿದಾರರು ಮತ್ತು ವಿವಿಧ ನಿಗಮ ಮಂಡಳಿಗಳಲ್ಲಿ ಸೇವೆ ಸಲ್ಲಿಸುತ್ತಿರುವ 3 ಲಕ್ಷ ಉದ್ಯೋಗಿಗಳಿಗೆ ಅನುಕೂಲವಾಗಲಿದೆ ಎಂದು ನೌಕರರ ಸಂಘ ಹೇಳಿತ್ತು.

ಇಂದಿನ ಪ್ರಮುಖ ಸುದ್ದಿ :-   ಮಂಗಳೂರು ಲಾಡ್ಜ್ ನಲ್ಲಿ ನಾಲ್ವರು ಆತ್ಮಹತ್ಯೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3.3 / 5. ಒಟ್ಟು ವೋಟುಗಳು 3

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement