ಕರ್ನಾಟಕದಲ್ಲಿ ಶೇ 20ರಷ್ಟು ಅಧಿಕ ಮಳೆ

ಬೆಂಗಳೂರು: ಕಳೆದ 10 ದಿನಗಳಲ್ಲಿ ಕರ್ನಾಟಕದಲ್ಲಿ ಮುಂಗಾರು ಮಳೆ ಎಡೆಬಿಡದೆ ಸುರಿಯುತ್ತಿದೆ. ರಾಜ್ಯದಲ್ಲಿ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಶೇ. 20ರಷ್ಟು ಅಧಿಕ ಮಳೆಯಾಗಿದೆ ಎಂದು ವರದಿಯಾಗಿದೆ.
ಇನ್ನೂ 2 ದಿನ ಮಳೆಯಾಗಲಿದ್ದು, 7 ಜಿಲ್ಲೆಗಳಲ್ಲಿ ರೆಡ್​​ ಅಲರ್ಟ್​ ಮುಂದುವರಿದಿದೆ. ಮುಂಗಾರಿನ ಅವಧಿಯಲ್ಲಿ ಅಂದರೆ ಜೂನ್ 1 ರಿಂದ ಜುಲೈ 19ರ ಮಧ್ಯದ ಅವಧಿಯಲ್ಲಿ ಕರ್ನಾಟಕದಲ್ಲಿ ವಾಡಿಕೆಯಂತೆ 484 ಮಿ.ಮೀ. ಮಳೆಯಾಗಬೇಕು. ಆ ವಾಡಿಕೆ ಪ್ರಮಾಣಕ್ಕಿಂತ ಹೆಚ್ಚು ಅಂದರೆ 578 ಮಿ.ಮೀ. ಮಳೆಯಾಗಿದೆ ಎಂದು ವರದಿಯಾಗಿದೆ.
ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್​ ಅಣೆಕಟ್ಟೆಗಳಾದ ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ (ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ) ಜಲಾಶಯಗಳ ನೀರಿನ ಮಟ್ಟ ಹೆಚ್ಚಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement