ಕರ್ನಾಟಕದಲ್ಲಿ ಸೋಮವಾರ 1606 ಮಂದಿಗೆ ಹೊಸ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಸೋಮವಾರ ಹೊಸದಾಗಿ 1606 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಇದೇವೇಳೆ 1937 ಜನರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ 467 ಮಂದಿಗೆ ಸೋಂಕು ತಗುಲಿದ್ದರೆ, 497 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಮೂವರು ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಇಂದು 31 ಮಂದಿ ಸೋಂಕಿತರು ಇದೇ ಸಮಯದಲ್ಲಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಸದ್ಯ 23,057 ಸಕ್ರಿಯ ಪ್ರಕರಣಗಳಿದೆ. ಇಂದು 1,14,072 ಮಂದಿಗೆ ಪರೀಕ್ಷೆ (COVID TEST) ನಡೆಸಲಾಗಿದೆ. ಬೆಂಗಳೂರಿನಲ್ಲಿ 8182 ಸಕ್ರಿಯ ಪ್ರಕರಣಗಳು ಇವೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೊಡಲಾಗಿದೆ.

26-07-2021 HMB Kannada

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement