ಕರ್ನಾಟಕದ ಮುಂದಿನ ಸಿಎಂ ಆಯ್ಕೆ: ದೆಹಲಿಯಲ್ಲಿ ಅಮಿತ್​ ಶಾ ತುರ್ತು ಸಭೆ; ರಾಜ್ಯಕ್ಕೆ ನಾಳೆ ಧರ್ಮೇಂದ್ರ ಪ್ರಧಾನ್

ಬೆಂಗಳೂರು: ಬಿ.ಎಸ್.​ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಕೂಡ ಅಂಗೀಕಾರವಾಗಿದೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯಾಗುವ ವರೆಗೂ ಹಂಗಾಮಿ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಕಾರ್ಯನಿರ್ವಹಿಸಲಿದ್ದಾರೆ.
ಯಡಿಯೂರಪ್ಪ ಬಳಿಕ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ಆಯ್ಕೆ ನಡೆಸಲುದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತಾ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ. ಸಂಸತ್​ ಭವನದಲ್ಲಿ ಅಮಿತ್​ ಶಾ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದ್ದು ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಹಾಗೂ ಪ್ರಹ್ಲಾದ್​ ಜೋಶಿ ಕೂಡ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಈಗಾಗಲೇ ಮುಖ್ಯಮಂತ್ರಿ ಅಗುವ ಸ್ಪರ್ಧೆಯಲ್ಲಿ ಹಲವು ನಾಯಕರ ಹೆಸರು ಕೇಳಿಬರುತ್ತಿದ್ದು, 2023ರ ರಅಜ್ಯ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಚರ್ಚೆ ನಡೆಸಲಾಗುತ್ತಿದೆ ಎನ್ನಲಾಗಿದೆ.
ಆಯ್ಕೆಗೂ ಮುನ್ನ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲು ಕೂಡ ಬಿಜೆಪಿ ಹೈಕಮಾಂಡ್​ ತೀರ್ಮಾನಿಸಿದೆ. ಇದೇ ಕಾರಣಕ್ಕೆ ರಾಜ್ಯಕ್ಕೆ ವೀಕ್ಷಕರಾಗಿ ಧರ್ಮೇಂದ್ರ ಪ್ರಧಾನ್​ ಅವರನ್ನು ರಾಜ್ಯಕ್ಕೆ ಕಳುಹಿಸಲು ನಿರ್ಧಾರಿಸಿದೆ. ನಾಳೆ (ಜುಲೈ 26) ರಾಜ್ಯಕ್ಕೆ ಆಗಮಿಸಲಿರುವ ಧರ್ಮೇಂದ್ರ ಪ್ರಧಾನ್​ ಶಾಸಕರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುರಿತು ಹೈ ಕಮಾಂಡ್​ ನಿರ್ಧಾರ ಮಾಡಿದ್ದು, ಈ ಕುರಿತು ಚರ್ಚೆಗೆ ಶಾಸಕಾಂಗ ಸಭೆ ಕರೆಯಲಾಗಿದೆ. ಈ ಶಾಸಕಾಂಗ ಸಭೆಯಲ್ಲಿ ಯಾರು ಮುಖ್ಯಮಂತ್ರಿ ಸಂಭಾವ್ಯರು ಎಂದು ತಿಳಿಸಲಿದ್ದು, ಅವರಿಗೆ ಎಲ್ಲಾ ಶಾಸಕರು ಬೆಂಬಲ ನೀಡಿ, ಸಹಕಾರ ನೀಡುವಂತೆ ತಿಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಮತ್ತೊಂದು ಉನ್ನತ ಮೂಲದ ಪ್ರಕಾರ ಹೈ ಕಮಾಂಡ್ ಸಾಕಷ್ಟು ಅಳೆದು ತೂಗಿ ಲಿಂಗಾಯತ ಸಮುದಾಯದರಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ನಿರ್ಧರಿಸಿದೆಯಂತೆ. ಇದರಲ್ಲಿ ಬಸನಗೌಡ ಪಾಟೀಲ್ ಯತ್ನಾಳ, ಮುರುಗೇಶ್ ನಿರಾಣಿ, ಅರವಿಂದ್ ಬೆಲ್ಲದ ಮತ್ತು ಲಕ್ಷ್ಮಣ ಸವದಿ, ಬೊಮ್ಮಾಯಿ ಹೆಸರುಗಳು ಚಾಲ್ತಿಯಲ್ಲಿದೆ. ಅಲ್ಲದೆ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ. ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಡಿಸಿಎಂ ಡಾ.ಅಶ್ವತ್ಥ ನಾರಾಯಣ ಅವರ ಹೆಸರುಗಳು ಸಹ ಚಾಲ್ತಿಯಲ್ಲಿದೆ. ಅಚ್ಚರಿಯ ಅಭ್ಯರ್ಥಿಗಲ ಆಯ್ಕೆಯ ಮಾತುಗಳೂ ಕೇಳಿಬರುತ್ತಿವೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement