ಹೊಸಪೇಟೆ: ತುಂಗಭದ್ರಾ ಜಲಾಶಯದ ಮೇಲ್ಭಾಗದ ಮಲೆನಾಡಿನಲ್ಲಿ ಹೆಚ್ಚು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ತುಂಗಭದ್ರಾ ಜಲಾಶಯದ ಎಲ್ಲಾ 33 ಕ್ರಸ್ಟ್ ಗೇಟ್ ಗಳನ್ನು ಸೋಮವಾರ ಸಂಜೆ ತೆರೆದು ನೀರನ್ನು ನದಿಗೆ ಹರಿಸಲಾಯಿತು.
33 ಕ್ರಸ್ಟ್ ಗೇಟ್ ಗಳ ಮೂಲಕ 1.20 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಹರಿ ಬಿಟ್ಟಿರುವುದರಿಂದ ಜಲಾಶಯ ಕೆಳಭಾಗದ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಅಪಾರ ಪ್ರಮಾಣದಲ್ಲಿ ಒಳಹರಿವು ಹೆಚ್ಚಿತ್ತಿರುವುದರಿಂದ ಅಣೆಕಟ್ಟಿನ ಎಲ್ಲಾ ಕ್ರಸ್ಟ್ ಗೇಟ್ ಗಳನ್ನು ತೆರೆದು ನೀರನ್ನು ಹೊರಬಿಡಲು ಟಿಬಿ ಬೋರ್ಡ್ ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ.ಮುಂಜಾಗ್ರತಾ ಕ್ರಮವಾಗಿ ತುಂಗಭದ್ರಾ ಜಲಾಶಯದಿಂದ ಜು.25ರಂದು 5 ಕ್ರಸ್ಟ್ ಗೇಟ್ ಗಳನ್ನು ತೆರೆದು ನೀರು ಹೊರಬಿಡಲಾಗಿತ್ತು. ಈಗ ಅಧಿಕ ಪ್ರಮಾಣದಲ್ಲಿ ನೀರಿನ ಒಳಹರಿವುಜಲಾಶಯಕ್ಕೆ ಬರುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲ 33 ಕ್ರಸ್ಟ್ ಗೇಟ್ ಗಳನ್ನು ತೆರೆದು ನೀರನ್ನು ನದಿಗೆ ಹರಿಬಿಡಲಾಗಿದೆ.
ಹಂಪಿ ಸ್ಮಾರಕಗಳು ಮುಳುಗಡೆ:
ತುಂಗಭದ್ರಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ನದಿಗೆ ಬಿಟ್ಟಿರುವುದರಿಂದ ಹಂಪಿಯ ಪುರಂದರ ಮಂಟಪ ಸೇರಿ ಕೆಲ ಸ್ಮಾರಕಗಳು ನೀರಿನಲ್ಲಿ ಮುಳುಗಡೆಯಾಗಿವೆ. ಅಲ್ಲದೆ, ನದಿ ಪಾತ್ರದಲ್ಲಿರುವ ಜಮೀನಿನಲ್ಲಿ ಬೆಳೆದ ಬೆಳೆಗಳು ಜಲಾವೃತವಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ