ಪಿಒಕೆ ಚುನಾವಣೆ: ಪಾಕ್‌ ಪ್ರಧಾನಿ ಇಮ್ರಾನ್ ಖಾನ್‌ ಪಕ್ಷಕ್ಕೆ ಗೆಲುವು

ಇಸ್ಲಾಮಾಬಾದ್‌: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆದ ಚುನಾವಣೆಯಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷ ಭರ್ಜರಿ ಜಯಭೇರಿ ಭಾರಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಈಗ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ಸ್ಥಳೀಯ ಸುದ್ದಿವಾಹಿನಿಗಳ ವರದಿಯಂತೆ, ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಿಟಿಐ ಪಕ್ಷವು 23 ಸ್ಥಾನಗಳನ್ನು ಗೆದ್ದಿದೆ, ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) 8 ಸ್ಥಾನಗಳಲ್ಲಿ ಹಾಗೂ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) 6 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಮುಸ್ಲಿಂ ಕಾನ್ಫರೆನ್ಸ್ ‌(ಎಂಸಿ), ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್‌ ಪಾರ್ಟಿ(ಜೆಕೆಪಿಪಿ) ತಲಾ ಒಂದು ಸ್ಥಾನವನ್ನು ಗೆದ್ದಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ಚುನಾವಣಾ ವಂಚನೆ ಆರೋಪ:
ಈ ಚುನಾವಣೆಯಲ್ಲಿ ವಂಚನೆ ನಡೆದಿದೆ. ಇದಕ್ಕೆ ಸಾಕ್ಷ್ಯಾಧಾರಗಳು ಇವೆ ಎಂದು ಪಿಪಿಪಿಯ ಉಪಾಧ್ಯಕ್ಷೆ ಶೆರಿ ರೆಹಮಾನ್‌ ಆರೋಪಿಸಿದ್ದಾರೆ. ಮತದಾನದ ವೇಳೆ ಪಿಟಿಐ ಕಾರ್ಯಕರ್ತರು ಪಿಪಿಪಿ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ. ಹಲವಾರು ಮತಗಟ್ಟೆಗಳಲ್ಲಿ ಮತದಾರರ ಪಟ್ಟಿಯಲ್ಲಿ ವ್ಯತ್ಯಾಸಗಳಿದ್ದವು ಎಂದು ಅವರು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ...: ಭಾರೀ ಮಳೆ-ಬಿರುಗಾಳಿಯ ನಡುವೆ ಹಸಿರು ಬಣ್ಣಕ್ಕೆ ತಿರುಗಿದ ದುಬೈನ ಆಕಾಶ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement