ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ: ಶಿಕಾರಿಪುರ ಪಟ್ಟಣ ಸ್ವಯಂ ಪ್ರೇರಿತ ಬಂದ್

ಶಿಕಾರಿಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ  ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಶಿಕಾರಿಪುರ ಪಟ್ಟಣದಲ್ಲಿ ವಾಣಿಜ್ಯ ಮಳಿಗೆಗಳ ಮಾಲೀಕರು ಸ್ವಯಂ ಪ್ರೇರಿತರಾಗಿ ಅಂಗಡಿ ಬಂದ್ ಮಾಡಿ  ತಮ್ಮ ನೋವು ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡುವುದಾಗಿ ಪ್ರಕಟಿಸುತ್ತಿದ್ದಂತೆಯೇ ಶಿಕಾರಿಪುರ ಪಟ್ಟಣದಲ್ಲಿ ಯಡಿಯೂರಪ್ಪ ಅವರ ಪರವಾಗಿ   ವಾಣಿಜ್ಯ ಮಳಿಗೆಗಳ ಮಾಲೀಕರು ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿ ಯಡಿಯೂರಪ್ಪ ಪರ ಜೈಕಾರ ಕೂಗುತ್ತಾ ಪ್ರಮುಖ ರಸ್ತೆಗಳಲ್ಲಿ ಹೆಜ್ಜೆ ಹಾಕಿದರು. ಮಾಳೇರಕೇರಿಯಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸದಲ್ಲಿ ನಿರವ ಮೌನ ಆವರಿಸಿತ್ತು.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ನಿಮ್ಮ ಕಾಮೆಂಟ್ ಬರೆಯಿರಿ

advertisement