ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಭಾನುವಾರ ನಡೆದ ಬಿಜೆಪಿ ಸರ್ಕಾರದ ಎರಡು ವರ್ಷ ಪೂರ್ಣಗೊಳಿಸಿದ ಸಾಧನಾ ಸಮಾವೇಶದಲ್ಲಿ ತಮ್ಮ ರಾಜೀನಾಮೆ ನಿರ್ಧಾರ ಪ್ರಕಟಿಸಿದ ನಂತರ  ರಾಜಭವನಕ್ಕೆ ತೆರಳಿ ರಾಜ್ಯಪಾಲ  ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ   ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಮಧಯಾಹ್ನ ಊಟದ ನಂತರ ರಾಜಭವನಕ್ಕೆ ತೆರಳಿ ರಾಜ್ಯಪಾಲ ಗೆಹ್ಲೋಟ್‌ ಅವರಿಗೆ ರಾಜೀನಾಮೆ ನೀಡುವುದಾಗಿ ಅವರು ಪ್ರಕಟಸಿದರು.

ತಮ್ಮ ರಾಜೀನಾಮೆ ವಿಚಾರ ಘೋಷಿಸುವ ಸಂದರ್ಭದಲ್ಲಿ ಯಡಿಯೂರಪ್ಪ ಗದ್ಗದಿತರಾದರು. ಇದು ದುಃಖದಿಂದ ಅಲ್ಲ, ಸಂತೋಷದಿಂದಲೇ ನಾನು ರಾಜೀನಾಮೆ ನೀಡುತ್ತೀದ್ದೇನೆ ಎಂದರು.
75 ವರ್ಷ ದಾಟಿದ ಯಡಿಯೂರಪ್ಪನವರಿಗೆ ಮತ್ತೆ 2 ವರ್ಷ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟ ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಅವರಿಗೆ ಶಬ್ಧಗಳಲ್ಲಿ ಅಭಿನಂದನೆ ಸಲ್ಲಿಸಲು ಸಾಧ್ಯವಿಲ್ಲ, ಸಂತೃಪ್ತಿಯಿಂದಲೇ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮತ್ತೊಮ್ಮೆ ಗದ್ಗದಿತರಾದರು.
ಭಾಷಣದ ಆರಂಭದಿಂದಲೇ ತುಂಬಾ ಭಾವುಕವಾಗಿ ಮಾತನಾಡಿದರು. ನಮ್ಮನ್ನು ಮಾತನಾಡಿಸಲು 50 ಮಂದಿ ಸಿಗದೇ ಇರುವ ಕಾಲದಲ್ಲಿ ಎಲ್ಲ ಕಾರ್ಯಕರ್ತರ ಜತೆಗೂಡಿ ರಾಜ್ಯಾದ್ಯಂತ ಪಾದಾಯಾತ್ರೆ ಮಾಡಿ ಪಕ್ಷ ಬಲಪಡಿಸುವ ಕೆಲಸ ಮಾಡಿದ್ದೇನೆ. ನಾನೆಂದು ಹಿಂದೆ ತಿರುಗಿ ನೋಡಲೇ ಇಲ್ಲ. ನನ್ನ ಕರ್ತವ್ಯವನ್ನು ಜನಮೆಚ್ಚುವ ರೀತಿಯಲ್ಲಿ ನಿರ್ವಹಿಸಿದೆ ಎಂಬ ತೃಪ್ತಿ ಮತ್ತು ಸಮಾಧಾನ ನನಗಿದೆ ಎಂದರು.

ಪ್ರಮುಖ ಸುದ್ದಿ :-   ಗೋಕರ್ಣ : ಸಮುದ್ರದ ಅಲೆಗೆ ಸಿಲುಕಿದ್ದ ಮೂವರು ಪ್ರವಾಸಿಗರ ರಕ್ಷಣೆ

ಮಂಡ್ಯದ ಬೂಕನಕೆರೆಯಲ್ಲಿ ಹುಟ್ಟಿ ಶಿವಮೊಗ್ಗಕ್ಕೆ ಬಂದು ಶಿಕಾರಿಪುರದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ನನ್ನ ಜೀವನವನ್ನು ಪ್ರಾರಂಭ ಮಾಡಿದೆ. ಆರ್​ಎಸ್​ಎಸ್​ ಪ್ರಚಾರಕನಾಗಿ ಕೆಲಸ ಆರಂಭ ಮಾಡಿ, ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು, ಪುರಸಭೆ ಅಧ್ಯಕ್ಷನಾದೆ. ಈ ವೇಳೆ ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಯಿತು. ನಾನು ಸತ್ತೇ ಹೋದೆ ಅಂದುಕೊಂಡಿದ್ದರು. ಆದರೆ, ಭಗವಂತನ ದಯೆಯಿಂದ ಬದುಕಿದೆ. ಇನ್ನು ಮುಂದೆ ಬದುಕಿದರೆ ನಾಡಿನ ಜನತೆಗಾಗಿ ಎಂದು ಅಂದೇ ತೀರ್ಮಾನಿಸಿದೆ. ಅಂದರಂತೆಯೇ ನಡೆದುಕೊಂಡೆ ಎಂಬ ತೃಪ್ತಿ ನನಗಿದೆ ಎಂದು ಹೇಳಿದರು.

ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಅಧಿಕಾರಕ್ಕೆ ಬಂದ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಎರಡು ವರ್ಷ ತುಂಬಿದೆ ಬಳಿಕ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಭಾಷಣ ಮಾಡುವಾಗ ಅವರು ಭಾವುಕರಾದರು.
ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ವರಿಷ್ಟರು ಸೂಚನೆ ನೀಡಿದ್ದಾರೆಂಬ ವದಂತಿ ಹಿನ್ನಲೆಯಲ್ಲಿ ಯಡಿಯೂರಪ್ಪನವರ ಇಂದಿನ ಭಾಷಣ ವಿದಾಯ ಭಾಷಣದಂತಿತ್ತು.
ತಾವು ಈವರೆಗೆ ಸಾಗಿ ಬಂದ ದಾರಿಯನ್ನು ಯಡಿಯೂರಪ್ಪನವರು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಅವರು ಭಾವುಕರಾಗಿದ್ದು, ತಾವು ಸೈಕಲ್‌ ಮೇಲೆ ಓಡಾಡಿ ಪಕ್ಷ ಕಟ್ಟಿದ್ದು, ತಮ್ಮ ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು, ವಾಜಪೇಯಿ ಅವರು ಕೇಂದ್ರಕ್ಕೆ ಬರುವಂತೆ ಹೇಳಿದ್ದಾಗ ತಾವು ಕರ್ನಾಟಕದಲ್ಲಿಯೇ ಪಕ್ಷ ಕಟಟುತ್ತೇನೆ ಎಂದು ಹೇಳಿದ್ದನ್ನು ನೆನಪಿಸಿಕೊಂಡು ಕಣ್ಣೀರಿಟ್ಟರು. ಭಾಷಣದ ಕೊನೆಯಲ್ಲಿ ತಮ್ಮ ರಾಜೀನಾಮೆ ನಿರ್ಧಾರ ಪ್ರಕಟಿಸಿದರು.

ಪ್ರಮುಖ ಸುದ್ದಿ :-   ವಿಧಾನಸೌಧ ಸ್ಫೋಟದ ಎಐ ವಿಡಿಯೊ ಸೃಷ್ಟಿಸಿ ಹಂಚಿಕೊಂಡ ಆರೋಪ : ಕಿಡಿಗೇಡಿ ಬಂಧನ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement