ಬಸವರಾಜ ಬೊಮ್ಮಾಯಿ ಸಿಎಂ ಸ್ಥಾನಕ್ಕೆ ಆಯ್ಕೆ: ರೂಪಾಲಿ ಸಂತಸ

ಕಾರವಾರ: ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿರುವುದು ಅತೀವ ಸಂತಸವಾಗಿದೆ ಎಂದು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ರೂಪಾಲಿ ನಾಯ್ಕ ಪ್ರತಿಕ್ರಿಯಿಸಿದ್ದಾರೆ.
ಮಾನ್ಯ ಬೊಮ್ಮಾಯಿ ಅವರು ಸರ್ವಾನುಮತದಿಂದ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿರುವುದು ಹರ್ಷದಾಯಕ ಸಂಗತಿ. ರೈತರು, ಬಡವರು, ಹಿಂದುಳಿದವರು, ದೀನ ದಲಿತರ ಬಗ್ಗೆ ಅಪಾರ ಕಾಳಜಿ ಉಳ್ಳವರಾಗಿರುವ ಮಾನ್ಯ ಬಸವರಾಜ ಬೊಮ್ಮಾಯಿ ಅವರು ಅಭಿವೃದ್ಧಿಪರ ನಾಯಕರು. ಅವರ ನೇತೃತ್ವದಲ್ಲಿ ನಮ್ಮ ರಾಜ್ಯ, ನಮ್ಮ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರ ಸರ್ವತೋಮುಖ ಅಭಿವೃದ್ಧಿ ಸಾಧಿಸಲಿದೆ ಎಂಬ ವಿಶ್ವಾಸವಿದೆ. ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಶಾಸಕರು ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement