ಕರ್ನಾಟಕದಲ್ಲಿ ಅತಿವೃಷ್ಟಿ, ಕೇಂದ್ರದಿಂದ 629 ಕೋಟಿ ರೂ. ಪರಿಹಾರ ಅನುಮೋದನೆ: ಸಚಿವೆ ಕರಂದ್ಲಾಜೆ

ಉಡುಪಿ: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ 2020ರಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಪಟ್ಟು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 629.03 ಕೋಟಿ ರೂಪಾಯಿ ಅನುಮೋದನೆ ನೀಡಿದೆ ಎಂದು ಕೇಂದ್ರದ ಕೃಷಿ- ರಾಜ್ಯ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮಹಾರಾಷ್ಟ್ರಕ್ಕೆ 701 ಕೋಟಿ ರೂ.ಗಳ ನೆರವಿನ ಅನುಮೋದನೆಯನ್ನು ಎಸ್‌ಡಿಆರ್‌ಎಫ್ ಮಾನದಂಡಗಳ ಅಡಿಯಲ್ಲಿ ರಾಜ್ಯ ಸರ್ಕಾರಕ್ಕೆ ನೀಡಿದೆ. ಅನಾವೃಷ್ಟಿ ಕಾರಣದಿಂದ 2020ನೇ ವರ್ಷದಲ್ಲಿ ರಾಜಸ್ಥಾನದಲ್ಲಿನ ಕೃಷಿ ಸಮುದಾಯಕ್ಕೆ ಅಪಾರ ಬೆಳೆ ನಷ್ಟ ಉಂಟಾಗಿದ್ದು, ಕೇಂದ್ರ ಸರಕಾರ ಈ ಬೆಳೆ ನಷ್ಟಕ್ಕೆ ನೆರವಿನ ರೂಪದಲ್ಲಿ 113.69 ಕೋಟಿ ರೂ.ಗಳನ್ನು ಎಸ್‍ಡಿಆರ್‍ಎಫ್ ಮಾನದಂಡಗಳ ಅಡಿಯಲ್ಲಿ ಅನುಮೋದಿಸಿದೆ ಎಂದು ಹೇಳಿದ್ದಾರೆ.
2020-21 ನೇ ವರ್ಷದಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಒಟ್ಟು 67.96 ಲಕ್ಷ ಹೆಕ್ಟೇರ್ ಕೃಷಿಭೂಮಿಯನ್ನು ಮಹಾರಾಷ್ಟ್ರ ರಾಜ್ಯದಲ್ಲಿ ವಿಮೆಗೆ ಒಳಪಡಿಸಿಲಾಗಿತ್ತು. ಈ ಸಾಲಿನ ಖಾರಿಫ್ ಮತ್ತು ರಬಿಯಲ್ಲಾದ ಬೆಳೆ ನಷ್ಟಕ್ಕೆ ಕೇಂದ್ರ ಸರ್ಕಾರ ಒಟ್ಟು ರೂ. 750.12 ಕೋಟಿ ಬಿಡುಗಡೆ ಮಾಡಿದ್ದು, 11.43 ಲಕ್ಷ ರೈತರು ಇದರ ಫಲಾನುಭವವನ್ನು ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.
ಈ ಕುರಿತು ಚುಕ್ಕೆಗುರಿತನ ಪ್ರಶ್ನೆಗೆ ಲೋಕಸಭೆಯಲ್ಲಿ ಕೇಂದ್ರ ಕೃಷಿ ಮತ್ತು ಕಲ್ಯಾಣ ಸಚಿವರು ಉತ್ತರಿಸಿದ್ದು, ಮಾನ್ಯ ಶೋಭಾ ಕರಂದ್ಲಾಜೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರು ಈ ಮಾಹಿತಿಯನ್ನು ನೀಡಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement