ಇಂದು ಬೆಳಿಗ್ಗೆ 11ಕ್ಕೆ ಸಿಎಂ ಆಗಿ ಬೊಮ್ಮಾಯಿ ಪ್ರಮಾಣವಚನ

ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಬೆಂಗಳೂರಿನ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದು, ಜುಲೈ 28ರ ಮಧ್ಯಾಹ್ನ 11ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನಿಯೋಜಿತ ಮುಖ್ಯಮಂತ್ರಿ ಆಗಿ ಆಯ್ಕೆಯಾಗುತ್ತಿದ್ದಂತೆ ಬೊಮ್ಮಾಯಿ ಅವರು ಯಡಿಯೂರಪ್ಪ ಕಾಲಿಗೆ ಬಿದ್ದು ನಮಸ್ಕರಿಸಿದರು.
ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಎಲ್ಲ ಶಾಸಕರು ನನ್ನ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಾರೆ. ನನ್ನ ಹೆಸರನ್ನು ಸೂಚಿಸಿ ಬಿಎಸ್ ವೈ ಆಶೀರ್ವಾದ ಮಾಡಿದ್ದಾರೆ. ತಮ್ಮನ್ನು ಮುಖ್ಯಮಂತ್ರಿ ಆಗಿ ಆಯ್ಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಯಡಿಯೂರಪ್ಪನವರಿಗೆ ಧನ್ಯವಾದ ತಿಳಿಸಿದರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕಾರವಾರ : ರಸ್ತೆ ಅಪಘಾತದಲ್ಲಿ ಖ್ಯಾತ ವೈದ್ಯ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement