ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ನಾಳೆಯೇ ಸಿದ್ಧತೆ ಮಾಡಿಕೊಳ್ಳಲು ಸೂಚನೆ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ನೂತನ ಮುಖ್ಯಮಂತ್ರಿಗಾಗಿ ಆಯ್ಕೆಗಾಗಿ ಭಾರೀ ಕಸರತ್ತುಗಳು ನಡೆಯುತ್ತಿದೆ. ದೆಹಲಿ ಮತ್ತು ಬೆಂಗಳೂರಿನಲ್ಲೂ ಹಲವು ಸಭೆಗಳು ನಡೆಯುತ್ತಿದ್ದು, ಎಲ್ಲವೂ ರಹಸ್ಯವಾಗಿಯೇ ಇದೆ. ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬ ಕುತೂಹಲಹೆಚ್ಚಾಗುತ್ತಿದ್ದು, ಈ ಮಧ್ಯೆ ನಾಳೆಯೇ (ಬುಧವಾರ) ನೂತನ ಮುಖ್ಯಮಂತ್ರಿಯ ಪ್ರಮಾನ ವಚನ ನಡೆಯುವ ಸಾಧ್ಯತೆ ನಿಚ್ಚಳವಾಗಿದೆ.
ಇದಕ್ಕೆ ಪುಷ್ಠಿ ನೀಡುವಂತೆ ಬುಧವಾರವೇ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯಪಾಲರ ಕಚೇರಿಯಿಂದ ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ ಎಂದು ವರದಿಯಾಗಿದೆ. ಇಂದಿನ ಬೆಳವಣಿಗೆಗಳ ನಮತರ ಇಂದು ಸಂಜೆ ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲೇ ನೂತನ ಮುಖ್ಯಮಂತ್ರಿ ಹೆಸರನ್ನು ಪ್ರಕಟ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕೆಲವರ ಪ್ರಕಾರ ಬಿಜೆಪಿ ಹೈಕಮಾಂಡ್‌ ಈಗಾಗಲೇ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಿದೆ. ಅದನ್ನು ಮುಚ್ಚಿದ ಲಕೋಟೆಯಲ್ಲಿ ಅದನ್ನು ವೀಕ್ಷಕರ ಬಳಿ
ಕಳುಹಿಸಲಾಗಿದೆ. ಆದರೆ ಅದರಲ್ಲಿ ಒಬ್ಬರ ಹೆಸರಿದೆಯೋ ಅಥವಾ ಇಬ್ಬರ ಹೆಸರಿದೆಯೋ ಗೊತ್ತಿಲ್ಲ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ.ಅರುಣ ಮತ್ತು ದೆಹಲಿಗೆ ತೆರಳಿದ್ದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ಸಂಜೆ 7ಕ್ಕೆ ನಗರದ ಖಾಸಗಿ ಹೋಟೆಲ್ ನಲ್ಲಿ ಶಾಸಕಾಂಗ ಸಭೆ ಏರ್ಪಡಿಸಲಾಗಿದೆ. ಅಲ್ಲಿಯೇ ನೂತನ ಮುಖ್ಯಮಂತ್ರಿ ಹೆಸರು ಪ್ರಕಟಿಸಿ ಒಪ್ಪಿಗೆ ಪಡೆಯಲಾಗುತ್ತದೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement