ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶಿವರಾಮ ಹೆಬ್ಬಾರ ಅಭಿನಂದನೆ

ಕಾರವಾರ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ಪಕ್ಷದ ಹಿರಿಯ ನಾಯಕರು ಹಾಗೂ ಆತ್ಮೀಯರಾದ ಬಸವರಾಜ ಬೊಮ್ಮಾಯಿ ಅವರಿಗೆ ಶಿವರಾಮ ಹೆಬ್ಬಾರ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಹೋರಾಟ ಮೂಲಕವಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿ ದಶಕಗಳ ಕಾಲ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅನುಭವಿ ರಾಜಕಾರಣಿ ಬಸವರಾಜ ಬೊಮ್ಮಾಯಿ ಅವರಿಗೆ ಕನ್ನಡ ನಾಡಿನ ಮುಖ್ಯಮಂತ್ರಿ ಸ್ಥಾನ ಲಭಿಸಿರುವುದು ಅತ್ಯಂತ ಸಂತಸದ ಸಂಗತಿ.
ಅವರ ನಾಯಕತ್ವ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹಾಗೂ ನಾಯಕರಾದ ಬಿ.ಎಸ್.ಯಡಿಯೂರಪ್ಪ ನವರ ಮಾರ್ಗದರ್ಶನದಲ್ಲಿ ಕರುನಾಡಿನಲ್ಲಿ ರೈತರ, ಶ್ರಮಿಕಪರ ಹಾಗೂ ಅಭಿವೃದ್ಧಿಯ ಪರವಾದ ಆಡಳಿತವನ್ನು ನೀಡುವುದರೊಂದಿಗೆ ರಾಜ್ಯದಲ್ಲಿ ಮತ್ತೊಮ್ಮೆ ಅಭಿವೃದ್ಧಿ ಶಕೆಯನ್ನು ಬರೆಯೋಣ ಎಂದು ಶುಭ ಹಾರೈಸುವುದಾಗಿ ತಿಳಿಸಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement